ಬಸ್, ದ್ವಿಚಕ್ರ ವಾಹನದ ನಡುವೆ ಅಪಘಾತ: ಹೆಡ್ ಕಾನ್ಸ್‌ಟೇಬಲ್ ಗೆ ಗಂಭೀರ ಗಾಯ
ದಕ್ಷಿಣ ಕನ್ನಡ: ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಹೆಡ್ ಕಾನ್ಸ್‌ಟೇಬಲ್ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ಮಂಗಳವಾರ ನಡೆದಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೈಕ್ ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಪುತ್ರಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಗಂಭೀರ ಗಾಯಗೊಂಡ ಧರ್ಣಪ್ಪ ಗೌಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹುಡುಗರ ಜೊತೆ ಸುತ್ತಾಡಿದ್ದಕ್ಕೆ ಬೈದ ಅಮ್ಮನನ್ನೇ ಹತ್ಯೆಗೈದ ಮಗಳು
ರಂಜಾನ್ ಆರಂಭವಾಗುತ್ತಿದ್ದಂತೆಯೇ ಭಾರೀ ಬೆಲೆಗೆ ಮಾರಾಟವಾದ ಒಂಟೆ
ಬಂಧನ ಭೀತಿ ಎದುರಿಸುತ್ತಿರುವ ಸಚಿವ ಸೋಮಣ್ಣ: ಮಾ.30ರಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಪ್ರಭಾಕರ್ ಭಟ್