ಅಸ್ಪೃಶ್ಯತೆ ಆಚರಿಸುವವರಿಗೆ ಚಾಟಿ ಬೀಸಲು ಸಿದ್ಧವಾಗ್ತಿದೆ ರಾಜ್ಯ ಬಿಜೆಪಿ ಸರ್ಕಾರ!
ಬೆಂಗಳೂರು: ರಾಜ್ಯದಲ್ಲಿ ಅಸ್ಪೃಶ್ಯತೆ ನಿರ್ಮೂಲನೆಗೆ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿ ಮಾಡಲು ಮುಂದಾಗಿದೆ ಎಂದು ಸದನದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ನಡೆದ ಅಸ್ಪೃಶ್ಯತೆ ಆಚರಣೆಯಿಂದ ಎಚ್ಚೆತ್ತುಕೊಂಡು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಸದನದಲ್ಲಿ ಮಾಹಿತಿ ನೀಡಿದರು.
ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು.
ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ವಿನಯ ಸಾಮರಸ್ಯ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಲಾಗುವುದು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ರಾಜ್ಯದಲ್ಲಿನ 6020 ಗ್ರಾಮ ಪಂಚಾಯಿತಿಗಳಲ್ಲೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಸಾಮರಸ್ಯ ಕಾಪಾಡಲು ಸದಸ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಮಹಿಳೆಯ ಬ್ಯಾಗ್ ಎಗರಿಸಿದ ಕಳ್ಳನ ಬಂಧನ!
ಯುವತಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಯುವಕ; ಆದರೆ ಮೃತಪಟ್ಟಿದ್ದು ಯುವಕ
1 ಕೋಟಿ ರೂ.ಗೂ ಅಧಿಕ ಮೌಲ್ಯದ ಬ್ರೌನ್ ಶುಗರ್ ಸಹಿತ ಆರೋಪಿಗಳ ಬಂಧನ
ಒಂದೊಂದೇ ರೂಪಾಯಿ ಕೂಡಿಟ್ಟು ಬೈಕ್ ಖರೀದಿಸಿದ ಯುವಕ
ಬಸ್, ದ್ವಿಚಕ್ರ ವಾಹನದ ನಡುವೆ ಅಪಘಾತ: ಹೆಡ್ ಕಾನ್ಸ್‌ಟೇಬಲ್ ಗೆ ಗಂಭೀರ ಗಾಯ