ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಗೆ ದುಷ್ಕರ್ಮಿಗಳ ದಾಳಿ: ಸಿಸಿಟಿವಿ, ಭದ್ರತಾ ಗೋಡೆ ಧ್ವಂಸ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿರುವ ಬಗ್ಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.
ಟ್ವಿಟ್ಟರ್‌ನಲ್ಲಿ ಈ ಬಗ್ಗೆ ತಿಳಿಸಿರುವ ಸಿಸೋಡಿಯಾ, ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ ಎಂದು ಹೇಳಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಸಿಸೋಡಿಯಾ ಆರೋಪಿಸಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಎಸ್‌ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ: ಶಾಸಕ ಎನ್.ಮಹೇಶ್
ಸಿಆರ್‌ಪಿಎಫ್ ಬಂಕರ್ ಮೇಲೆ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆ
ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್: ಸಿಎಫ್ಐ ಪ್ರತಿಭಟನೆ
ಇಂಧನ ದರ ಏರಿಕೆ ಮೂಲಕ ನರೇಂದ್ರ ಮೋದಿ ಸರ್ಕಾರ ಪ್ರತಿ ದಿನ ಸುಲಿಗೆ ಮಾಡುತ್ತಿದೆ: ಕಾಂಗ್ರೆಸ್ ಆಕ್ರೋಶ