ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ಬಹಿಷ್ಕಾರ ಹಾಕುತ್ತೀರಾ? | ಕುಮಾರಸ್ವಾಮಿ ಪ್ರಶ್ನೆ - Mahanayaka

ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ಬಹಿಷ್ಕಾರ ಹಾಕುತ್ತೀರಾ? | ಕುಮಾರಸ್ವಾಮಿ ಪ್ರಶ್ನೆ

kumara swamy
30/03/2022

ಬೆಂಗಳೂರು: ವರ್ಷದೊಡಕಿನಲ್ಲಿ ಮಾಂಸ ಹಲಾಲ್ ಮಾಡಿದ್ದೋ, ಅಲ್ಲವೋ ಎಂದು ಯಾರೂ ನೋಡುವುದಿಲ್ಲ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಇದನ್ನು ಹಾಳು ಮಾಡಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಹಲಾಲ್ ಮಾಂಸ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೆಲವು ಕಡೆ ಇವರೇ ವಿವಾದವನ್ನು ಹುಟ್ಟು ಹಾಕಿದ್ದಾರೆ. ಮಾಂಸದಲ್ಲಿ ಯಾರು ಕೂಡ ಹಲಾಲ್ ಹೌದೋ, ಅಲ್ಲವೋ ಎಂದು ನೋಡಲು ಹೋಗುವುದಿಲ್ಲ ಎಂದು ಹೇಳಿದರು.

ಇನ್ನೂ ಕೋಲಾರದ ಶಿವಾರಪಟ್ಟಣದಲ್ಲಿ 35 ವರ್ಷದಿಂದ ಮುಸ್ಲಿಂ ಸಮುದಾಯದ ಬಂಧುಗಳು ಹಿಂದೂ ದೇವರ ವಿಗ್ರಹಗಳನ್ನು ಕೆತ್ತುತಿದ್ದಾರೆ. ಇವರನ್ನು ಯಾವಾಗ ಬಹಿಷ್ಕರಿಸುತ್ತೀರಿ ಎಂದು ಅವರು ಪ್ರಶ್ನಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇತ್ತೀಚಿನ ಸುದ್ದಿ