ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಗಾಂಜಾ ಸಹಿತ ಆರೋಪಿಯ ಬಂಧನ
ಬಂಟ್ವಾಳ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಶೇಖಬ್ಬ ಅವರ ಪುತ್ರ ಸಿದ್ದೀಕ್ ಯಾನೆ ಕೋಳಿ ಸಿದ್ದೀಕ್(36) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ ಸುಮಾರು 80 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಜೀಪ ಮೂಡ ಗ್ರಾಮದ ಬೇಂಕ್ಯೆ ಸಮೀಪದ ಬರ್ಕೆ ಎಂಬಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತನ ರಿಕ್ಷಾದಲ್ಲಿ ಇರಿಸಲಾಗಿದ್ದ ಗಾಂಜದ ಬಗ್ಗೆ ಮಾಹಿತಿ ನೀಡಿದ್ದಾನೆ.
ಅಲ್ಲದೆ ಉಪ್ಪಳ ಕಡೆಯಿಂದ ಗಾಂಜಾನವನ್ನು ತಂದು ಪ್ಯಾಕೆಟ್‌ಗಳನ್ನಾಗಿ ಮಾಡಿ ಗಿರಾಕಿಗಳಿಗೆ ಮಾರಾಟ ಮಾಡುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚು, ಇದು ನಿನಗೆ ಒಳ್ಳೆಯದಲ್ಲ: ಪತ್ರಕರ್ತನಿಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ ಯೋಗ ಗುರು ರಾಮದೇವ್
ವೇದಿಕೆಯಲ್ಲಿಯೇ ಕೊಳ್ಳೇಗಾಲದ ಮುಂದಿನ ಅಭ್ಯರ್ಥಿಯನ್ನು ಘೋಷಿಸಿದ ಯಡಿಯೂರಪ್ಪ
ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣ: ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಪೊಲೀಸ್ ವಶಕ್ಕೆ