ರಂಜಾನ್ ವೇಳೆ ಹಿಂದೂಗಳ ವ್ಯಾಪಾರಕ್ಕೆ ಧಕ್ಕೆ ತರಬೇಡಿ, ಅವರೊಂದಿಗೆ ಸಹಕರಿಸಿ: ಮುಸ್ಲಿಮ್ ಮುಖಂಡರಿಂದ ಮನವಿ
![ramzan](https://www.mahanayaka.in/wp-content/uploads/2022/03/ramzan.jpg)
ಪವಿತ್ರ ರಂಜಾನ್ ತಿಂಗಳಲ್ಲಿ ಹಿಂದೂ ವ್ಯಾಪಾರಿಗಳ ವ್ಯಾಪಾರಕ್ಕೆ ಯಾವುದೇ ಮುಸಲ್ಮಾನರು ಅಡ್ಡಿ ಪಡಿಸದೇ ಅವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡುವಂತೆ ಮುಸ್ಲಿಂ ಮಸೀದಿಗಳ ಧಾರ್ಮಿಕ ಮುಖಂಡರು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಮುಸ್ಲಿಮರಿಗೆ ಹಿಂದೂಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವ್ಯಾಪಾರ ನಿರಾಕರಿಸುವಂತೆ ಬಿಜೆಪಿ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಮುಸ್ಲಿಮ್ ಧಾರ್ಮಿಕ ಮುಖಂಡರು ಸೌಹಾರ್ದದ ಸಂದೇಶವನ್ನು ನೀಡಿದ್ದು, ಹಿಂದೂಗಳೊಂದಿಗೆ ವ್ಯಾಪಾರ ಮಾಡುವಂತೆ ಮುಸ್ಲಿಮರಿಗೆ ಪ್ರೋತ್ಸಾಹಿಸಿದ್ದಾರೆ.
ಪವಿತ್ರ ರಂಜಾನ್ ತಿಂಗಳಲ್ಲಿ ಮಸೀದಿಗಳ ವ್ಯಾಪ್ತಿಯಲ್ಲಿ ನೂರಾರು ಹಿಂದೂ ಬಾಂಧವರು ಹಣ್ಣು-ಬಟ್ಟೆ ಸೇರಿದಂತೆ ವಿವಿಧ ರೀತಿಯ ವ್ಯಾಪಾರಗಳನ್ನು ಮಾಡುತ್ತಾರೆ. ಅವರ ವ್ಯಾಪಾರಕ್ಕೆ ಯಾವುದೇ ಧಕ್ಕೆ ತರುವಂತೆ ಯಾರೂ ವರ್ತಿಸಬಾರದು. ಅವರಿಗೆ ವ್ಯಾಪಾರಕ್ಕೆ ಅವಕಾಶ ಮತ್ತು ಸಹಕಾರ ನೀಡಬೇಕು ಎಂದು ಜಾಮೀಯಾ ಮಸೀದಿಯ ಮುಖ್ಯ ಧಾರ್ಮಿಕ ಗುರುಗಳಾದ ಮೌಲಾನಾ ಡಾ.ಮಸೂದ್ ಇಮ್ರಾನ್ ಸುತ್ತೋಲೆ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೊಸಳೆಗಳು, ಹಲ್ಲಿಗಳು, ಹಾವುಗಳು: ಆತನ ಜಾಕೆಟ್, ಕಾರಿನಲ್ಲಿತ್ತು 1,700 ಜೀವಿಗಳು
ಚಂದ್ರಗಿರಿಯಲ್ಲಿ ಪತ್ತೆಯಾಯ್ತು 40 ಕೆ.ಜಿ. ತೂಕದ ಬೃಹತ್ ಆಮೆ
ಒಂದೇ ದೇಹ, ಎರಡು ತಲೆ ಹೊಂದಿದ ಅಪರೂಪದ ಸಯಾಮಿ ಶಿಶು ಜನನ
ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಗಾಂಜಾ ಸಹಿತ ಆರೋಪಿಯ ಬಂಧನ
ಬಾಯಿ ಮುಚ್ಚು, ಇದು ನಿನಗೆ ಒಳ್ಳೆಯದಲ್ಲ: ಪತ್ರಕರ್ತನಿಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ ಯೋಗ ಗುರು ರಾಮದೇವ್