ತಂದೆಯ ಕೊಲೆ ಪ್ರಕರಣ: ಪುತ್ರ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ
ಮಂಗಳೂರು: ತಂದೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ದೋಷಿ ಎಂದು ಸಾಬೀತಾಗಿದೆ ಎಂದು ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಹರೀಶ್ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದ್ದು ಇವರ ಮದುವೆಗೆ ಮನೆಯವರ ವಿರೋಧವಿತ್ತು ಮಾತ್ರವಲ್ಲದೆ ಹರೀಶನ ಸಹೋದರಿ ಮದುವೆ ಆಗದೆ ಆರೋಪಿ ಮದುವೆ ಮಾಡುವುದಿಲ್ಲ ಎಂದು ತಂದೆ ಶ್ರೀಧರ ಪೂಜಾರಿ ಮಗನಿಗೆ ಎಚ್ಚರಿಕೆ ನೀಡಿದ್ದರು.
ಇದರಿಂದ ಮನೆಮಂದಿಯ ಜತೆ ಮನಸ್ತಾಪ ಹೊಂದಿದ್ದ ಹರೀಶ್ 2021ರ ಜನವರಿಯಲ್ಲಿ ತನ್ನ ಪ್ರೇಯಸಿ ಜೊತೆ ಮನೆಬಿಟ್ಟು ಹೋಗಿದ್ದರು. ಬಳಿಕ 3ವಾರಗಳ ನಂತರ ಹಿಂತಿರುಗಿ ಬಂದ ಹರೀಶ್ ಪುಜಾರಿ ಮತ್ತು ಆತನ ಪ್ರೇಯಸಿಗೆ ಮನೆಯೊಳಗೆ ಪ್ರವೇಶ ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಹರೀಶ್ ಪೂಜಾರಿ ಮತ್ತು ಅವರ ತಂದೆ ನಡುವೆ ಜಗಳ ನಡೆದಿತ್ತು .ಈ ಸಂದರ್ಭ ಹರೀಶ್ ತನ್ನ ತಂದೆ ಶ್ರೀಧರ ಪೂಜಾರಿ ಅವರಿಗೆ ಕೊಲೆ ಬೆದರಿಕೆ ಹಾಕಿ ಮನೆ ಬಿಟ್ಟು ಹೋಗಿದ್ದ, ಬಳಿಕ ಅದೇ ದಿನ ಸಂಜೆ ಸುಮಾರು 6:30ಕ್ಕೆ ತಂದೆ ಸಮೀಪದ ಪೇಟೆಗೆ ಹೋಗಿ ಮನೆಗೆ ಬಂದಾಗ ಪುತ್ರ ಹರೀಶ್ ಮರದ ಪಕ್ಕಾಸಿ ನಿಂದ ತಂದೆಯ ತಲೆ ಮತ್ತು ಮುಖಕ್ಕೆ ಗಂಭೀರವಾಗಿ ಹೊಡೆದಿದ್ದ ಇದರಿಂದ ತೀವ್ರ ಗಾಯಗೊಂಡಿದ್ದ ಶ್ರೀಧರ್ ಪೂಜಾರಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದರು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇನ್ಸ್ಪೆಕ್ಟರ್ ಸಂದೇಶ್ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು .
ಕೊಲೆ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ ಆರ್ ಪಲ್ಲವಿ ಅವರ ಪೂರ್ಣಗೊಳಿಸಿದ್ದು,ಆರೋಪಿ ಹರೀಶ್ ಪೂಜಾರಿ ದೋಷಿಯೆಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಶ್ವ ಮೂರ್ಖರ ದಿನ ದಿನದ ಇತಿಹಾಸ [April Fools’ Day] ಏನು ಗೊತ್ತಾ?
ಮುಸ್ಲಿಂ ಮಗುವಿಗೆ ಸಿದ್ಧಗಂಗ ಶ್ರೀಗಳ ನೆನಪಿಗೆ ‘ಶಿವಮಣಿ’ ಎಂದು ನಾಮಕರಣ
ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜನ್ಮ ದಿನ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ
ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ 18.80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ
ಗ್ರಾಹಕರಿಗೆ ಬಿಗ್ ಶಾಕ್: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆ