ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ ಶಾಕ್ ನೀಡಿದ ವಿದ್ಯುತ್ ಬೆಲೆ ಏರಿಕೆ! - Mahanayaka
10:32 AM Thursday 12 - December 2024

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ ಶಾಕ್ ನೀಡಿದ ವಿದ್ಯುತ್ ಬೆಲೆ ಏರಿಕೆ!

power price hike
04/04/2022

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯ ನಡುವೆಯೇ ವಿದ್ಯುತ್ ಬೆಲೆ ಏರಿಕೆ ಕೂಡ ಶಾಕ್ ನೀಡಿದ್ದು, ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ.

ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ಪ್ರತಿ ಯೂನಿಟ್‌ ಗೆ 5 ಪೈಸೆಗಳಷ್ಟು ಇಂಧನ ಶುಲ್ಕಗಳ ಹಾಗೂ ಪ್ರತಿ ಹೆಚ್.ಪಿ/ಕಿ.ವಾ/ಕೆ.ವಿ.ಎ.ಗೆ  ರೂ.10 ರಿಂದ ರೂ.30 ರವರೆಗೆ ನಿಗದಿತ ಶುಲ್ಕಗಳ ಹೆಚ್ಚಳವನ್ನು ಅನುಮೋದಿಸಲಾಗಿದೆ. ಇದರೊಂದಿಗೆ ಪ್ರತಿ ಯೂನಿಟ್ ದರ 35 ಪೈಸೆಯಷ್ಟಾಗಿರುತ್ತದೆ (ಶೇ.4.33 ಹೆಚ್ಚಳ)’ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಸೀದಿ ಧ್ವನಿ ವರ್ಧಕ ತೆರವಿಗೆ ಆಗ್ರಹ: ಸಚಿವ ಈಶ್ವರಪ್ಪ, ಕುಮಾರಸ್ವಾಮಿ ಏನು ಹೇಳಿದರು?

ಗೋರಾಖ್ ನಾಥ್ ಮಠಕ್ಕೆ ನುಗ್ಗಿ ಮಚ್ಚಿನಿಂದ ದಾಳಿ ನಡೆಸಿದ ಮಾನಸಿಕ ಅಸ್ವಸ್ಥ

ಮುಂದಿನ ಮಹಾಮಾರಿ ಕೀಟಗಳಿಂದ;  ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಕೋವಿಡ್ ನಿರ್ಬಂಧಗಳನ್ನು  ಸಡಿಲಗೊಳಿಸಿದ ತಮಿಳುನಾಡು ಸರ್ಕಾರ

ರಂಝಾನ್ ಉಪವಾಸದ ಸಂದರ್ಭದಲ್ಲಿ ಮುಸಲ್ಮಾನರು ಖರ್ಜೂರ ಸೇವಿಸುವುದು ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ