ಕೊಲೆಯಾದ ಯುವಕನನ್ನು ದಲಿತ ಅಂದ್ರಿ, ಹಿಂದೂ ಅನ್ನಲಿಲ್ಲ ಯಾಕೆ? : ಕುಮಾರಸ್ವಾಮಿ
ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮಾಜಿ ಸಿಎಂ ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ.
ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯುವಕನ ಕೊಲೆಗೆ ಸಂಬಂಧಿಸಿದಂತೆ ಸಚಿವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಕನ್ನಡ ಮಾತನಾಡಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ಅರೆಬರೆ ಮಾಹಿತಿ ಇಟ್ಟುಕೊಂಡು ಮಾತನಾಡಿದ್ದಾರೆ. ದಲಿತ ಯುವಕನನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು. ಇದನ್ನು ವಿವಾದವಾಗಿ ಮಾಡುವ ಹುನ್ನಾರ ಬೇಡ ಎಂದು ಅವರು ಎಚ್ಚರಿಸಿದರು.
ಕೊಲೆಯಾದ ಯುವಕನ್ನು ದಲಿತ ಯುವಕ ಎಂದು ಕರೆದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಎಲ್ಲಿಯೂ ಆತನನ್ನು ಹಿಂದೂ ಯುವಕ ಎಂದು ಕರೆಯಲಿಲ್ಲ. ಇದು ಏನನ್ನು ಸೂಚಿಸುತ್ತದೆ? ದಲಿತ ಯುವಕ ಹಿಂದೂ ಅಲ್ಲವೇ? ಯಾಕೆ ಈ ತಾರತಮ್ಯ ಎಂದು ಕುಮಾರಸ್ವಾಮಿ ಇದೇ ವೇಳೆ ಚಾಟಿ ಬೀಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಿರ್ದೇಶಕ, ನಟ ಶ್ರೀನಿವಾಸನ್ ಅವರ ಆರೋಗ್ಯ ಸ್ಥಿತಿ ಗಂಭೀರ
ಉತ್ತರ ಪತ್ರಿಕೆಯಲ್ಲಿ “ಪುಷ್ಪಾ… ಪುಸ್ಪರಾಜ್” ಎಂದು ಬರೆದಿಟ್ಟ ವಿದ್ಯಾರ್ಥಿನಿ: ಶಿಕ್ಷಕರು ಕಂಗಾಲು
ಎರಡು ತಲೆ ಹಾವು ಮಾರಾಟ ಯತ್ನ ಆರೋಪಿಗಳ ಬಂಧನ
ನಟ ಮೋಹನ್ ಲಾಲ್ ವಿರುದ್ಧ ದಂತ ಪ್ರಕರಣ: ಸರ್ಕಾರದ ನಿರ್ಧಾರದ ವಿರುದ್ಧದ ಅರ್ಜಿಗಳನ್ನು ತಿರಸ್ಕರಿಸಿದ ಕೋರ್ಟ್