ಅಸಾರಾಂ ಬಾಪು ಬೆಂಬಲಿಗರ ಆಶ್ರಮದ ಬಳಿ ಬಾಲಕಿಯ ಮೃತದೇಹ ಪತ್ತೆ!
ಲಕ್ನೋ: ಅತ್ಯಾಚಾರ ಹಾಗೂ ಹಲವು ಗಂಭೀರ ಅಪರಾಧಗಳಲ್ಲಿ ಜೈಲು ಸೇರಿರುವ ದೇವಮಾನವ ಅಸಾರಾಂ ಬಾಪು ಅವರ ಬೆಂಬಲಿಗರು ನಿರ್ಮಿಸಿದ ಆಶ್ರಮದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ 13 ವರ್ಷದ ಬಾಲಕಿಯ ಮೃತದೇಹ ಶುಕ್ರವಾರ ಪತ್ತೆಯಾಗಿದೆ.
ಮೃತ ಬಾಲಕಿ ಬಿಮೌರ್ ಗ್ರಾಮದ ನಿವಾಸಿಯಾಗಿದ್ದು, ಗುರುವಾರ ನಾಪತ್ತೆಯಾಗಿದ್ದಳು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಶಿವರಾಜ್ ಪ್ರಜಾಪತಿ ತಿಳಿಸಿದ್ದಾರೆ.
ಬಾಲಕಿ ನಾಪತ್ತೆಯಾದ ಕೂಡಲೇ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಲಕಿಯ ಮೃತದೇಹವು ಬಹ್ರೈಚ್ ರಸ್ತೆಯಲ್ಲಿರುವ ಆಶ್ರಮದ ಹೊರಗೆ ಕಾರಿನಲ್ಲಿ ಪತ್ತೆಯಾಗಿದೆ.
ಈ ಆಶ್ರಮವನ್ನು ಅಸಾರಾಂ ಬಾಪು ಅವರ ಬೆಂಬಲಿಗರು ನಿರ್ಮಿಸಿದ್ದಾರೆ ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಬಾಲಕಿಯ ಸಾವಿಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ಘಟನೆಗೆ ಸಂಬಂದಿಸಿದಂತೆ ಪೋಲಿಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಶ್ರಮದ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎಸಿ ಬ್ಲಾಸ್ಟ್: ಒಂದೇ ಮನೆಯ ನಾಲ್ವರು ಸಜೀವ ದಹನ
ರೈಲು ಹಳಿಯ ಬಳಿ ನಿಂತು ಸೆಲ್ಫಿ: ಮೂವರು ಯುವಕರ ದಾರುಣ ಸಾವು
ಮಂಗಳೂರು: ನಡು ರಸ್ತೆಯಲ್ಲಿ ಬೆಂಕಿ ಹತ್ತಿಕೊಂಡು ಉರಿದ ಬಸ್
ಮುಸ್ಲಿಮ್ ಮಹಿಳೆಯರ ಅತ್ಯಾಚಾರಕ್ಕೆ ಕರೆ ನೀಡಿದ ಸ್ವಾಮೀಜಿ
ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಮತ್ತೊಂದು ವಿವಾದ