ಶ್ರೀರಾಮನವಮಿ: ಕಲ್ಲು ತೂರಾಟ ಹಿನ್ನೆಲೆಯಲ್ಲಿ ಶೋಭಾಯಾತ್ರೆ ರದ್ದು
ಕೋಲಾರ: ಶ್ರೀರಾಮನವಮಿ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಶೋಭಾಯಾತ್ರೆಯನ್ನು ರದ್ದು ಮಾಡಿದ್ದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲುನಲ್ಲಿ ನಡೆದಿದೆ.
ಶುಕ್ರವಾರ ಮುಳಬಾಗಿಲು ಪಟ್ಟಣದಲ್ಲಿ ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಸಂಜೆ ಶೋಭಾಯಾತ್ರೆ ನಡೆಯುತ್ತಿದ್ದು, ಶೋಭಾಯಾತ್ರೆ ಸಾಗುತ್ತಿದಾಗ ಜಹಂಗೀರ್ ಸರ್ಕಲ್ ಬಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.
ಈ ವೇಳೆ ಕಾರು ಮತ್ತು ಪೊಲೀಸರ ವಾಹನಗಳ ಮೇಲೂ ದುಷ್ಕರ್ಮಿಗಳು ಕಲ್ಲು ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಿಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಳಬಾಗಿಲಿನಲ್ಲಿ ಈಗ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬೆಂಗಳೂರಲ್ಲಿ ಹೆಚ್ಚಿದ ಭದ್ರತೆ:
ಇಂದು ರಾಮನವಮಿ ಹಿನ್ನೆಲೆ ನಗರದ ಪ್ರಮುಖ ಕಡೆಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ.
ಆಯಾ ಠಾಣೆ ಇನ್ಸ್ ಪೆಕ್ಟರ್ ಗಳಿಗೆ ಡಿಸಿಪಿಗಳು ಹೊಣೆ ನೀಡಿದ್ದು, ಪ್ರತಿ ಠಾಣಾ ವ್ಯಾಪ್ತಿಯಲ್ಲೂ ಸಿಬ್ಬಂದಿ ರೌಂಡ್ಸ್ ಹಾಕಬೇಕು. ನಗರದಲ್ಲಿ ಶ್ರೀರಾಮ ಮಂದಿರ ಇರುವ ಕಡೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸೇನೆಯನ್ನು ವಿನ್ಯಾಸ ಮಾಡಬೇಕು ಡಿಸಿಪಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಂದ್ರು ಹತ್ಯೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ: ಸಿಎಂ ಬೊಮ್ಮಾಯಿ
ಮೋದಿಯನ್ನು ಬಲವಂತವಾಗಿ ತಬ್ಬಿಕೊಳ್ಳುವ ಪಕ್ಷ ನಮ್ಮದಲ್ಲ: ರಾಹುಲ್ ಗಾಂಧಿಗೆ ಮಾಯಾವತಿ ಖಾರ ಪ್ರತಿಕ್ರಿಯೆ
ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು