ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ, ಸಿಎಂ, ಮಾಜಿ ಸಿಎಂಗಳು - Mahanayaka
10:19 PM Thursday 12 - December 2024

ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ, ಸಿಎಂ, ಮಾಜಿ ಸಿಎಂಗಳು

ambedkar jayanti
14/04/2022

ಬೆಂಗಳೂರು: ಇಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ರಾಷ್ಟ್ರಾದ್ಯಂತ ಅದ್ದೂರಿಯಾಗಿ ನಡೆಯಲಿದ್ದು, ಇಂದಿನಿಂದ ಮುಂದಿನ ವರ್ಷ ಎಪ್ರಿಲ್ 14ರವರೆಗೆ ಅಂದರೆ ವರ್ಷ ಪೂರ್ತಿ ದೇಶದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ನಡೆಯುತ್ತಲೇ ಇರುತ್ತದೆ. ಇಂತಹ ಮಹಾನಾಯಕ ಜನಿಸಿದ ಈ ಶುಭ ದಿನದಂದು ಪ್ರಧಾನಿ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು ಅಂಬೇಡ್ಕರ್ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ(Ambedkar Jayanti 2022)ಯಂದು ಅವರಿಗೆ ನಮನಗಳು. ಅವರು ಭಾರತದ ಪ್ರಗತಿಗೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ್ದಾರೆ. ನಮ್ಮ ರಾಷ್ಟ್ರಕ್ಕಾಗಿ ಅವರ ಕನಸುಗಳನ್ನು ನನಸಾಗಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತ್ರುತ್ವದ ಮೂಲಕ ಜಾತ್ಯಾತೀತ ಮತ್ತು ಸಮಾಜವಾದಿ ಪ್ರಜಾಪ್ರಭುತ್ವದ ದೇಶ ಕಟ್ಟಲು ಡಾ. ಬಿ.ಆರ್ ಅಂಬೇಡ್ಕರ್ ಎಳೆದು ತಂದು ನಿಲ್ಲಿಸಿದ ವಿಮೋಚನಾ ರಥವನ್ನು ಮುಂದಕ್ಕೆ ಒಯ್ಯಲು ನಾವೆಲ್ಲ ಕೈಜೋಡಿಸೋಣ. ನಾಡಿನ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜಗತ್ತಿನ ಸರ್ವಶ್ರೇಷ್ಠ ಸಂವಿಧಾನದ ಶಿಲ್ಪಿ ಎಂದೇ ಖ್ಯಾತಿಪಡೆದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯಂದು ಆ ಸಾಧಕ ಚೇತನಕ್ಕೆ ಶ್ರದ್ಧಾಪೂರ್ವಕ ಪ್ರಣಾಮಗಳು. ದೇಶ ಕಟ್ಟುವ ಕಾರ್ಯದಲ್ಲಿ ಅದ್ವಿತೀಯ ಕೊಡುಗೆ ನೀಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಹಕ್ಕುಗಳನ್ನು ಮತ್ತು ಮುಂದಡಿಯಿಡುವ ಭರವಸೆಯನ್ನೂ ಕಲ್ಪಿಸಿಕೊಟ್ಟು ಅಮರರಾಗಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವ ಎಂಬ ಮೂಲಭೂತ ತತ್ತ್ವಗಳನ್ನು ಧರ್ಮವು ಗುರುತಿಸಿ, ಅವುಗಳನ್ನು ಒಳಗೊಳ್ಳಲೇಬೇಕು ಎಂದು ಬಾಬಾ ಸಾಹೇಬ್‌ ಪ್ರತಿಪಾದಿಸಿದ್ದರು. ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡೋಣ, ಸಂವಿಧಾನ ಶಿಲ್ಪಿ, ಮಹಾನ್‌ ಜ್ಞಾನಿಗಳು, ಈ ಯುಗದ ಶ್ರೇಷ್ಠ ದಾರ್ಶನಿಕರಾದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿ ದಿನದಂದು ಆ ಮಹಾನ್‌ ಚೇತನಕ್ಕೆ ನನ್ನ ಭಾವಪೂರ್ಣ ಪ್ರಣಾಮಗಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಭಾರತದ ಭಾಗ್ಯವಿಧಾತ,ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಸಮಾನತೆಯನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ಹೋರಾಡಿದ ಡಾ. ಬಿ. ಆರ್‌ ಅಂಬೇಡ್ಕರ್ ರವರ ಸಾಧನೆ ಹಾಗೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಿಂಬೆ ಹಣ್ಣಿನ ಬೆಲೆ ದಿಡೀರ್ ಏರಿಕೆ :100 ಕೆ.ಜಿಗೂ ಅಧಿಕ ನಿಂಬೆಹಣ್ಣು ಕಳವು

ಸಿಎಂ ಬೊಮ್ಮಾಯಿ ಕಾರಿಗೆ ಎಸ್‌ ಡಿಪಿಐ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರರ್ದಶನ

ಈಶ್ವರಪ್ಪನವರ ಬೆವರಿಳಿಸಿದ ಫೋನ್ ಕರೆ: ಗಾಬರಿಯಿಂದ ಬೆಂಗಳೂರಿಗೆ ತೆರಳಿದ ಈಶ್ವರಪ್ಪ

ಮಸೀದಿ ಬಳಿಯಲ್ಲಿ ಯುವಕನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ

ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ!

ಇತ್ತೀಚಿನ ಸುದ್ದಿ