ಬೀದಿ ನಾಯಿಗಳ ದಾಳಿಗೆ ಮತ್ತೊಂದು ಮುಗ್ದ ಜೀವ ಬಲಿ
![daravada](https://www.mahanayaka.in/wp-content/uploads/2022/04/daravada.jpg)
ಧಾರವಾಡ: ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿಯಾದ ದಾರುಣ ಘಟನೆ ಧಾರವಾಡದ ನವಲೂರಿನ ರೈಲ್ವೆ ಗೇಟ್ ಬಳಿ ನಡೆದಿದೆ.ಮೃತ ಬಾಲಕನ್ನು ದುಮ್ಮವಾಡ ಗ್ರಾಮದ ಪ್ರಥಮ ನೀರಲಕಟ್ಟಿ (11) ಎಂದು ಗುರುತಿಸಲಾಗಿದೆ.
ಶಾಲೆಗೆ ರಜೆ ಇದ್ದ ಕಾರಣ ರಜೆ ಕಳೆಯಲೆಂದು ನವಲೂರಿನ ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಜ್ಜನಿಗೆ ಮಧ್ಯಾಹ್ನದ ಊಟ ಕೊಡಲೆಂದು ತೋಟಕ್ಕೆ ಹೋಗುತ್ತಿದ್ದ ಸಮಯದಲ್ಲಿ ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ಮಾಡಿದೆ.
ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.
ಈ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಗಿದ್ದು ಬೀದಿ ನಾಯಿಗಳ ದಾಳಿಗೆ ಮಕ್ಕಳು ಬಲಿಯಾಗುತ್ತಿರುವುದು ಇದು ಮೂರನೇ ಪ್ರಕರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಂದಿ ಬಗ್ಗೆ ಅಜಯ್ ದೇವಗನ್ ಹೇಳಿಕೆಗೆ ಸಿ.ಟಿ.ರವಿ ಪ್ರತಿಕ್ರಿಯೆ
ಮಾರಕಾಸ್ತ್ರಗಳಿಂದ ಕೊಚ್ಚಿ ಬಾಡಿ ಬಿಲ್ಡರ್ ನ ಬರ್ಬರ ಹತ್ಯೆ!
ಬ್ಯಾನರ್ ಹಾನಿಗೊಳಿಸಿದ್ದಕ್ಕೆ ಅಪ್ರಾಪ್ತ ಮಕ್ಕಳನ್ನು ಪೋಲಿಸ್ ಠಾಣೆಯಲ್ಲಿ ಕೂರಿಸಿದ ಪೊಲೀಸರು
ಭ್ರಷ್ಟರು ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೆಲಸ ಮುಗಿಸಿ ಬರುತ್ತಿದ್ದ ಯುವತಿಯ ಮೇಲೆ ಆಟೋ ಚಾಲಕ, ಆತನ ಸ್ನೇಹಿತನಿಂದ ಅತ್ಯಾಚಾರ