ಕಿನ್ಯಾ ಗ್ರಾಮ ಪಂಚಾಯತ್ ನಿಂದ ದಲಿತರ ಕಡೆಗಣನೆ: ಪಂಚಾಯತ್ ಕಚೇರಿಯೆದುರು ಪ್ರತಿಭಟನೆ  - Mahanayaka
6:18 AM Thursday 12 - December 2024

ಕಿನ್ಯಾ ಗ್ರಾಮ ಪಂಚಾಯತ್ ನಿಂದ ದಲಿತರ ಕಡೆಗಣನೆ: ಪಂಚಾಯತ್ ಕಚೇರಿಯೆದುರು ಪ್ರತಿಭಟನೆ 

protest
05/05/2022

ಕಿನ್ಯಾ: ದಲಿತರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಅವರ ಬದುಕನ್ನು ತೀರಾ ನಿರ್ಲಕ್ಷಿಸಿದ ಮಂಗಳೂರು ತಾಲೂಕಿನ ಕಿನ್ಯಾ ಗ್ರಾಮ ಪಂಚಾಯತ್ ನ ದಲಿತ ವಿರೋಧಿ ಧೋರಣೆಯ ವಿರುದ್ಧ ದಲಿತ ಹಕ್ಕುಗಳ ಸಮಿತಿಯ ನೇತ್ರತ್ವದಲ್ಲಿ ಕಿನ್ಯಾ ಗ್ರಾಮ ಪಂಚಾಯತ್ ನ ಎದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ಪ್ರತಿಭಟನೆಯನ್ನು‌ಉದ್ಘಾಟಿಸಿ ಮಾತನಾಡಿದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹಸಂಚಾಲಕರಾದ ಡಾ.ಕೃಷ್ಣಪ್ಪ ಕೊಂಚಾಡಿ, ವಾಸಿಸಲು ಮನೆ, ಶೌಚಾಲಯ, ಸಮರ್ಪಕ ಕುಡಿಯುವ ನೀರು, ದಾರಿದೀಪ, ಸಂಪರ್ಕ ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳನ್ನು ನೀಡದೆ ಕಿನ್ಯಾ ಗ್ರಾಮ ಪಂಚಾಯತ್ ನ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಈ ವಿಚಾರದಲ್ಲಿ ಜನಪ್ರತಿನಿಧಿಗಳು ಅಕ್ಷಮ್ಯ ಅಪರಾಧವೆಸಗಿದ್ದಾರೆ. ಸರಕಾರದ ಡಿಸಿ ಮನ್ನಾ ಜಾಗ ಮಂಜೂರು ಆಗಿದ್ದರೂ, ಅದಕ್ಕೆ ಸಂಬಂಧಿಸಿದ ಸಮರ್ಪಕ ಭೂದಾಖಲೆಗಳು ಇನ್ನೂ ದಲಿತರ ಕೈ ಸೇರಿಲ್ಲ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಅದ್ದರಿಂದ ದಲಿತರ ಭೂಮಿ ದಾಖಲೆಗಳನ್ನು ಸರಿಪಡಿಸಲು ಕೂಡಲೇ ಕಂದಾಯ ಅದಾಲತ್ ನಡೆಸಬೇಕೆಂದು ಒತ್ತಾಯಿಸಿದರು.

CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಪ್ರತಿಯೊಂದು ಹಣದಲ್ಲಿ ಶೇಕಡಾ 25ರಷ್ಟು ಹಣವನ್ನು‌ ದಲಿತ ಸಮುದಾಯಕ್ಕಾಗಿ ಮೀಸಲಿಡಬೇಕೆಂದಿದ್ದರೂ, ಇಂದಿನವರೆಗೂ ಆಳುವ ಸರಕಾರಗಳು ಯಾವುದೇ ರೀತಿಯ ಗಮನ ನೀಡಿಲ್ಲ. ವಾಸ್ತವತೆ ಹೀಗಿರುವಾಗ ದಲಿತ ಮೀಸಲು ನಿಧಿ ಯಾರ ಜೇಬು ಸೇರುತ್ತಿದೆ ಎಂದು ಪ್ರಶ್ನಿಸಿದ ಅವರು, ಅಭಿವೃದ್ಧಿಯ ಬಗ್ಗೆ ನಿರಂತರವಾಗಿ ಬೊಗಳೆ ಬಿಡುವ ಸರಕಾರಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳನ್ನು ನಿರಾಕರಿಸಿ ಮಾಡುವ ಅಭಿವೃದ್ಧಿಗೆ ಯಾವ ಅರ್ಥವೂ ಇಲ್ಲವಾಗಿದೆ. ದಲಿತರ ಪ್ರಶ್ನೆಗಳನ್ನು ಕೂಡಲೇ ಇತ್ಯರ್ಥಗೊಳಿಸದಿದ್ದಲ್ಲಿ ತಾಲೂಕು ಪಂಚಾಯತ್ ಕಚೇರಿಗೆ ಹಾಗೂ ಜನಪ್ರತಿನಿಧಿಗಳಿಗೆ ಘೆರಾವ್ ಹಾಕಲಾಗುವುದು ಎಂದು ಹೇಳಿದರು

ಪ್ರಾಸ್ತಾವಿಕವಾಗಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿಯ ಗೌರವ ಸಲಹೆಗಾರರಾದ ಯೋಗೀಶ್ ಜಪ್ಪಿನಮೊಗರು, ಕಳೆದ ಹಲವಾರು ವರ್ಷಗಳಿಂದ ಕಿನ್ಯಾ ಗ್ರಾಮದಲ್ಲಿ ದಲಿತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರಲ್ಲದೇ, ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದಲ್ಲಿ ತೀವ್ರ ರೀತಿಯ ಪರಿಣಾಮವನ್ನು ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನುದ್ದೇಶಿಸಿ ವಕೀಲರಾದ ಮನೋಜ್ ವಾಮಂಜೂರುರವರು ಮಾತನಾಡಿದರು. ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಮಂಗಳೂರು ನಗರ  ಅಧ್ಯಕ್ಷರಾದ ರಾಧಾಕೃಷ್ಣ, ಕಾರ್ಯದರ್ಶಿ ಕೃಷ್ಣ ತಣ್ಣೀರುಬಾವಿ, DHS ಕಿನ್ಯಾ ಗ್ರಾಮ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ, ಕಾರ್ಯದರ್ಶಿ ರೋಹಿದಾಸ್ ಇತರ ನಾಯಕರಾದ ಕೊರಗಪ್ಪ ಮುಂತಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕನ್ನಡ ಕೋಟ್ಯಾಧಿಪತಿಯಲ್ಲಿ ಸ್ಪರ್ಧಿಸಿದ್ದ ಲೈನ್ ಮೆನ್ ಆತ್ಮಹತ್ಯೆಗೆ ಶರಣು

ಮಸೀದಿಗಳ ಎದುರು ಸೌಂಡ್​ ಬಾಕ್ಸ್ ಹಾಕಿ ಹನುಮಾನ್​ ಚಾಲೀಸ್ ಹಾಕ್ತೇವೆ: ಬಿಜೆಪಿ ಸರ್ಕಾರಕ್ಕೆ ಸಿದ್ಧಲಿಂಗ ಸ್ವಾಮೀಜಿ ಸವಾಲು

ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ವೀರಪ್ಪನ್: ರಾಮ್ ಗೋಪಾಲ್ ವರ್ಮಾ

ಮತ್ತೊಮ್ಮೆ ಪ್ರಶಸ್ತಿ ಪಡೆದ “ಜೈ ಭೀಮ್” ಚಿತ್ರ: ಒಂದೇ ಸಮಾರಂಭದಲ್ಲಿ 2 ಪ್ರಶಸ್ತಿ!

ಇಂದಿಗೆ ಹೆಚ್ಚು ಪ್ರಸ್ತುತವಾಗಿರುವ ಮಹಾರ್ ಸಮುದಾಯವನ್ನುದ್ದೇಶಿಸಿ ಅಂಬೇಡ್ಕರರು ಹೇಳಿದ ಆ ಮಾತುಗಳು!

ಇತ್ತೀಚಿನ ಸುದ್ದಿ