ಮತ್ತೊಮ್ಮೆ ಗ್ರಾಹಕನ ಕೈ ಸುಟ್ಟ ಎಲ್ ಪಿಜಿ ಸಿಲಿಂಡರ್ ಬೆಲೆ: 50ರೂ. ಏರಿಕೆ
ನವದೆಹಲಿ: ದೇಶದಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಮೇಲೆ 50ರೂ ಏರಿಕೆ ಮಾಡಲಾಗಿದೆ.
ಕಳೆದ ಮಾ.22ರಂದು ಅಡುಗೆ ಅನಿಲದ ಬೆಲೆಯನ್ನು 50ರೂ.ಗೆ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50ರೂ.ಗೆ ಹೆಚ್ಚಳ ಮಾಡಲಾಗಿದೆ. ಒಂದೂವರೆ ತಿಂಗಳಲ್ಲಿ ಅಡುಗೆ ಅನಿಲ ದರ 100 ರೂಪಾಯಿ ಹೆಚ್ಚಳ ಮಾಡುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗಿದೆ.
ಕಳೆದ ವಾರ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 104 ರೂ.ಗಳಿಗೆ ಏರಿಕೆ ಮಾಡಲಾಗಿತ್ತು. ಈಗ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 50ರೂ.ಗೆ ಏರಿಕೆ ಮಾಡಲಾಗಿದ್ದು, ಪ್ರತಿ ಸಿಲಿಂಡರ್ 990.5ರೂ.ಗೆ ಲಭ್ಯವಾಗಲಿದೆ.
ದಿನ ಬಳಕೆ ವಸ್ತುಗಳು ಸೇರಿದಂತೆ ಪೆಟ್ರೋಲ್, ಡೀಸೆಲ್ ಬೆಲೆ, ಅಡುಗೆ ಅನಿಲ ಹೀಗೆ ಎಲ್ಲ ಬೆಲೆಗಳು ಗಗನಕ್ಕೇರುತ್ತಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ತೊಂದರೆಗೀಡಾಗುತ್ತಿದ್ದಾರೆ. ಇದರ ಜೊತೆಗೆ ಬೆಲೆ ಏರಿಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನುವ ಆತಂಕ ಸೃಷ್ಟಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಇನ್ನಿಲ್ಲ
ಬಾಲಕಿಯ ಆತ್ಮಹತ್ಯೆಗೆ ದುಷ್ಪ್ರೇರಣೆ: ತಲೆಮರೆಸಿಕೊಂಡಿದ್ದ ಯುವಕನ ಬಂಧನ
ಮುಸ್ಲಿಮ್ ಯುವತಿಯನ್ನು ಮದುವೆಯಾಗಿದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!
ಭಾವಿ ಪತಿಯನ್ನೇ ಅರೆಸ್ಟ್ ಮಾಡಿದ ಮಹಿಳಾ ಸಬ್ ಇನ್ಸ್ ಪೆಕ್ಟರ್!
ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ: ಇಬ್ಬರ ದಾರುಣ ಸಾವು
ಗ್ರಾಹಕರಿಗೆ ಶಾಕ್ ನೀಡಲಿರುವ ಬ್ರಿಟಾನಿಯಾ: ಬಿಸ್ಕೆಟ್ ಗಳ ಬೆಲೆ ಹೆಚ್ಚಾಗಲಿದೆಯೇ?