ರೈಲಿನಲ್ಲೂ ಲೌಡ್ ಸ್ಪೀಕರ್ ಗೆ ಕಂಟಕ! | ಲೌಡ್ ಸ್ಪೀಕರ್ ನಿಷೇಧಿಸಿದ ರೈಲ್ವೆ ಇಲಾಖೆ - Mahanayaka
6:01 AM Thursday 12 - December 2024

ರೈಲಿನಲ್ಲೂ ಲೌಡ್ ಸ್ಪೀಕರ್ ಗೆ ಕಂಟಕ! | ಲೌಡ್ ಸ್ಪೀಕರ್ ನಿಷೇಧಿಸಿದ ರೈಲ್ವೆ ಇಲಾಖೆ

train
10/05/2022

ನವದೆಹಲಿ: ಸದ್ಯ ದೇಶಾದ್ಯಂತ ಲೌಡ್ ಸ್ಪೀಕರ್ ಗಲಾಟೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಭಾರತೀಯ ರೈಲ್ವೆ ಕೂಡ ರೈಲಿನೊಳಗೆ ಲೌಡ್ ಸ್ಪೀಕರ್ ನ್ನು ನಿಷೇಧಿಸಿದ್ದು, ರಾತ್ರಿ ವೇಳೆ ಪ್ರಯಾಣಿಕರು ರೈಲಿನಲ್ಲಿ ಲೌಡ್ ಸ್ಪೀಕರ್ ಹಾಕಿ ಸಂಗೀತ ಕೇಳುವುದು, ಇತರ ಪ್ರಯಾಣಿಕರಿಗೆ ತೊಂದರೆಯಾಗುವಂತೆ ಫೋನ್ ನಲ್ಲಿ ಮಾತನಾಡುವುದನ್ನು ನಿಷೇಧಿಸಿದೆ.

ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶ|ದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ.

ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು ನಿರ್ವಹಣೆ ಸಿಬ್ಬಂದಿ ಈ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ರೈಲ್ವೆ ತಿಳಿಸಿದೆ.

ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರು ಮೊಬೈಲ್‌ ನಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಷರತ್ತುಗಳ ನಡುವೆಯೂ 60 ವರ್ಷ ಮೇಲಿನ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಒಂಟಿ ಮಹಿಳಾ ಪ್ರಯಾಣಿಕರಿಗೆ ರೈಲ್ವೆ ಸಿಬ್ಬಂದಿ ಅಗತ್ಯ ನೆರವು ನೀಡುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕುತೂಹಲಕ್ಕೆ ಕಾರಣವಾದ ನವದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ!

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಕಾಂಗ್ರೆಸ್ ನಾಯಕನ ಪುತ್ರನ ವಿರುದ್ಧ ಅತ್ಯಾಚಾರದ ಆರೋಪ: ಮತ್ತೌಷಧಿ ನೀಡಿ ಯುವತಿಯ ಅತ್ಯಾಚಾರ

ಸುಪ್ರಭಾತ ಅಭಿಯಾನ: ಖಡಕ್ ಎಚ್ಚರಿಕೆ ನೀಡಿದ ಸಚಿವ ಅರಗ ಜ್ಞಾನೇಂದ್ರ

ಡ್ರಾಮ ದಂಗಲ್: ಮೈಕ್ ತೆಗೆಸದಿದ್ದರೆ ಸರ್ಕಾರದ ವಿರುದ್ಧ ಕಾನೂನು ಹೋರಾಟ | ಮುತಾಲಿಕ್ ಘೋಷಣೆ

ಇತ್ತೀಚಿನ ಸುದ್ದಿ