ಕಾಂಗ್ರೆಸ್ ತೊರೆಯುವ ಮೊದಲು ಹಾರ್ದಿಕ್ ಪಟೇಲ್ ಹೈಕಮಾಂಡ್ ಗೆ ಹೇಳಿದ್ದೇನು?
ಅಹಮದಾಬಾದ್: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯ ರಾಜಕೀಯದಲ್ಲಿ ಭಾರೀ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದು, ಅಧಿಕೃತವಾಗಿ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ
ನಾನು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಹುದ್ದೆಗೆ ರಾಜೀನಾಮೆ ನೀಡಲು ಧೈರ್ಯ ಮಾಡಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ಈ ಹೆಜ್ಜೆಯಿಂದ ಭವಿಷ್ಯದಲ್ಲಿ ನಾನು ಗುಜರಾತ್ ಗೆ ನಿಜವಾಗಿಯೂ ಧನಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ ಎಂದು ಹಾರ್ದಿಕ್ ಪಟೇಲ್ ಟ್ವೀಟ್ ನಲ್ಲಿ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ.
ಬಿಜೆಪಿ ನಾಯಕತ್ವಕ್ಕೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇದೆ. ಕಾಂಗ್ರೆಸ್ ಬಗ್ಗೆ ನನಗಿರುವ ಅಸಮಾಧಾನದಿಂದ ನಾನಿದನ್ನು ಹೇಳುತ್ತಿಲ್ಲ. ಬಿಜೆಪಿಯವರು ತಮ್ಮ ಸಂಘಟನೆಗೆ ಬಹಳ ಶ್ರಮ ಹಾಕುತ್ತಾರೆ. ಆಗಾಗ ಬದಲಾವಣೆಗಳನ್ನ ಮಾಡುತ್ತಿರುತ್ತಾರೆ. ಹೊಸ ಆವಿಷ್ಕಾರಗಳನ್ನು ತರುತ್ತಿರುತ್ತಾರೆ. ಹಲವು ವರ್ಷಗಳಿಂದ ಇದು ನಡೆಯುತ್ತಾ ಬಂದಿದೆ. ಕಾಂಗ್ರೆಸ್ ಸೋಲುತ್ತಿದೆ, ಬಿಜೆಪಿ ಗೆಲ್ಲುತ್ತಿದೆ ಎಂದು ಜನರೂ ಮಾತನಾಡುತ್ತಿದ್ದಾರೆ” ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ಗುಜರಾತ್ ನ ವಿಪಕ್ಷವಾಗಿ ನಾವು ಜನರ ಧ್ವನಿ ಎತ್ತಲು ವಿಫಲರಾಗಿದ್ದೇವೆ. ಜನರ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಅದಕ್ಕಾಗಿ ಹೋರಾಡುವುದು ವಿಪಕ್ಷದ ಕರ್ತವ್ಯ. ನಾವು ಅದರಲ್ಲಿ ಎಡವಿದ್ದೇವೆ. ಜನರು ಬೇರೆ ಆಯ್ಕೆಗಳತ್ತ ಆಲೋಚಿಸುತ್ತಿದ್ದಾರೆ ಎಂದು ಹಾರ್ದಿಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಪಾಟಿದಾರ್ ಪರ ಹೋರಾಟಗಾರ ಪಟೇಲ್ 2019 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು. ಪಟೇಲ್ ಅವರು ಕಳೆದ ಕೆಲವು ವಾರಗಳಿಂದ ಗುಜರಾತ್ ಕಾಂಗ್ರೆಸ್ ಘಟಕದಲ್ಲಿ ಆಂತರಿಕ ಕಲಹದ ಬಗ್ಗೆ ದೂರು ನೀಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ನ ಉದಾಸೀನತೆ, ಸ್ಥಳೀಯ ನಾಯಕರ ನಿರ್ಲಕ್ಷ್ಯದ ನಡುವೆಯೇ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಎಷ್ಟು ಗಂಟೆಗೆ ಪ್ರಕಟವಾಗಲಿದೆ?: ಇಲ್ಲಿದೆ ಮಾಹಿತಿ
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಮದ್ರಸಾ ಶಿಕ್ಷಕ ಬಂಧನ
32 ವರ್ಷಗಳ ಜೈಲು ಶಿಕ್ಷೆಯ ಬಳಿಕ ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ ಬಿಡುಗಡೆ
ಟೆಸ್ಟ್ ಡ್ರೈವ್ ಮಾಡಿ ಬರುತ್ತೇನೆಂದು ಹೋದವ ಕಾರಿನೊಂದಿಗೆ ಪರಾರಿ!: ಶೋರೂಂ ಸಿಬ್ಬಂದಿ ಕಂಗಾಲು