ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರ ಸಾವು
ಬೆಂಗಳೂರು: ನಗರದಲ್ಲಿ ಸರಿಯುತ್ತಿರುವ ಭಾರೀ ಮಳೆಯಿಂದಾಗಿ ಉಲ್ಲಾಳ ಕೆರೆ ಸಮೀಪದ ಉಪಕಾರ್ ಲೇಔಟ್ ಬಸ್‌ನಿಲ್ದಾಣದ ಬಳಿ ಪೈಪ್ ಲೈನ್ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಬಿದ್ದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಉಪಕಾರ್ ಲೇಔಟ್ ಬಸ್‌ನಿಲ್ದಾಣದ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಇಬ್ಬರು ಪೈಪ್ ನಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರು ಗುತ್ತಿಗೆದಾರರೂ ಅಪಾಯದಿಂದ ಪಾರಾಗಿದ್ದು ಜೆಸಿಬಿ ನೆರವಿನಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ’
ತ್ರಿಲೋಕ್ ಅವರು ನೀಡಿದ ದೂರಿನ ಆಧಾರದಲ್ಲಿ ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೆಗಾ ಎಂಜಿನಿಯರಿಂಗ್ ಆಯಂಡ್ ಇನ್ ಫ್ರಾಸ್ಟ್ರಕ್ಚರ್ ಎಸ್ಟೇಟ್ ನ ಯೋಜನಾ ವ್ಯವಸ್ಥಾಪಕ ಶಿವಕುಮಾರ್, ಕಾಮಗಾರಿ ಎಂಜಿನಿಯರ್ ಹರೀಶ್ ರೆಡ್ಡಿ, ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನರಸಿಂಹರಾಜು, ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸುತ್ತಿದ್ದ ಮನೋಜ್ ಯಾದವ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ: ಗಾಯದ ಮೇಲೆ ಬರೆ!
ತಲೆ ನೋವಾಗುತ್ತಿದೆ ಎಂದು ಕೋಣೆಗೆ ತೆರಳಿದ ಸ್ಯಾಕ್ಸೋಫೋನ್ ವಾದಕಿ ನೇಣಿಗೆ ಶರಣು
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ