ರಿವಾಲ್ವಾರ್ ತೋರಿಸಿ ಬೆದರಿಸಿ ಪಿಜಿ ಮಾಲಿಕನಿಂದ ಯುವತಿಯ ಅತ್ಯಾಚಾರ!
ಬೆಂಗಳೂರು: ವ್ಯಾಸಂಗಕ್ಕೆ ಬಂದಿದ್ದ ಯುವತಿಯೋರ್ವಳನ್ನು ಪಿಜಿ ಮಾಲಿಕ ರಿವಾಲ್ವಾರ್ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವರದಿಗಳ ಪ್ರಕಾರ, ಸಂತ್ರಸ್ತೆಯ ದೂರಿನನ್ವಯ ಆರೋಪಿ, ಬಿಹಾರ ಮೂಲದ ಉದ್ಯಮಿಯನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅನಿಲ್ ರವಿಶಂಕರ್ ಪ್ರಸಾದ್ ಎಂಬಾತ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ಟೈಲ್ಸ್ ವ್ಯಾಪಾರ ಮಾಡುತ್ತಿದ್ದ ಈತ ಪಿಜಿ ಕೂಡ ನಡೆಸುತ್ತಿದ್ದ ಎನ್ನಲಾಗಿದೆ.
ಯುವತಿಯನ್ನು ರಿವಾಲ್ವಾರ್ ತೋರಿಸಿ ಬೆದರಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ರಿವಾಲ್ವಾರ್ ನ್ನು ಜಪ್ತಿ ಮಾಡಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಟ್ವಿಟ್ಟರ್ ನಲ್ಲಿ ಟ್ರೆಂಟ್ ಆದ ‘ರಿಜೆಕ್ಟ್ ಬ್ರಾಹ್ಮಿನ್ ಟೆಕ್ಟ್ಸ್ ಬುಕ್’: ಚಕ್ರತೀರ್ಥ ಹಳೆಯ ಪೋಸ್ಟ್ ವೈರಲ್
ಎಲೆಕ್ಟ್ರಿಕ್ ಬೈಕ್ ನ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಶಾಕ್ ತಗಲಿ ಯುವತಿ ಸಾವು
ಎಸ್ ಡಿಎಂ ಕಾಲೇಜಿನ ಕಾರ್ಯದರ್ಶಿ ಡಾ.ಬಿ.ಯಶೋವರ್ಮಾ ನಿಧನ
ಇವ್ರು ನೋಡಿದ್ರಾ? ಸುಮ್ ಸುಮ್ನೇ ಕ್ರಿಯೇಟ್ ಮಾಡ್ತಾರೆ: ವಿಪಕ್ಷಗಳ ವಿರುದ್ಧ ಈಶ್ವರಪ್ಪ ಕಿಡಿ