1% ಕಮಿಷನ್ ಪಡೆದದ್ದಕ್ಕೆ ಆರೋಗ್ಯ ಸಚಿವನನ್ನು ಕಿತ್ತೆಸೆದು ಅರೆಸ್ಟ್ ಮಾಡಿಸಿದ ಆಮ್ ಆದ್ಮಿ ಪಕ್ಷ
ನವದೆಹಲಿ: ಶೇ.1 ಪರ್ಸೆಂಟ್ ಕಮಿಷನ್ ಪಡೆದ ಸಚಿವನ ವಿರುದ್ಧ ಪಂಜಾಬ್ ಆಮ್ ಆದ್ಮಿ ಸರ್ಕಾರ ಕಠಿಣ ಕ್ರಮಕೈಗೊಂಡಿದ್ದು, ಸ್ವತಃ ಪಂಜಾಬ್ ಸಿಎಂ ಭಗವಂತ್ ಮಾನ್ ಅವರೇ, ಈ ವಿಚಾರವನ್ನು ಬೆಳಕಿಗೆ ತಂದಿದ್ದು, ತಮ್ಮ ಸಚಿವ ಸಂಪುಟದ ಸಚಿವರೊಬ್ಬರು ಲಂಚ ಸ್ವೀಕರಿಸಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಲಂಚ ಸ್ವೀಕರಿಸಿದ ಆರೋಪದಲ್ಲಿ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದ್ದು, ಅತ್ತ ಸಚಿವ ಸ್ಥಾನದಿಂದ ವಜಾಗೊಳಿಸುತ್ತಿದಂತೆಯೇ ಪಂಜಾಬ್ ಪೊಲೀಸರು ಸಿಂಗ್ಲಾ ಅವರನ್ನು ಬಂಧಿಸಿದ್ದಾರೆ.
ಇಂದು ಮಾಧ್ಯಮಗೋಷ್ಠಿ ಕರೆದ ಭಗವಂತ್ ಮಾನ್, ನನ್ನ ಸಚಿವ ಸಂಪುಟದ ಸಚಿವರೊಬ್ಬರು ಪ್ರತಿ ಟೆಂಟರ್ ಅಥವಾ ಖರೀದಿಯಿಂದ ಶೇ.1ರಷ್ಟು ಕಮಿಷನ್ ಕೇಳುತ್ತಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಈ ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಈ ವಿಚಾರ ಪ್ರತಿಪಕ್ಷಗಳಿಗೆ ಕೂಡ ತಿಳಿದಿಲ್ಲ. ಲಂಚ ಪಡೆಯುತ್ತಿದ್ದ ಸಚಿವರ ವಿರುದ್ಧ ಕಠಿಣ ಕ್ರಮಕೈಗೊಂಡು ಅವರನ್ನು ಸಂಪುಟದಿಂದ ಕೈ ಬಿಡುತ್ತಿದ್ದೇನೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದರು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕ್ರಮವನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಟ್ವಿಟರ್ ನಲ್ಲಿ ಶ್ಲಾಘಿಸಿದ್ದಾರೆ. ಭಗವಂತ್ ಮಾನ್ ಅವರ ಈ ಕ್ರಮ ನನ್ನ ಕಣ್ಣಲ್ಲಿ ನೀರು ತರಿಸಿದೆ. ನಿಮ್ಮ ಬಗ್ಗೆ ಹೆಮ್ಮೆ ಇದೆ ಭಗವಂತ್. ಇಡೀ ರಾಷ್ಟ್ರ ಇಂದು ಎಎಪಿ ಬಗ್ಗೆ ಹೆಮ್ಮೆ ಪಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗ ಮಗು ಜೀವಂತ!
ಅಪಾಯಕಾರಿ ಕೆಮಿಕಲ್ ಸೋರಿಕೆ: ಹಲವರು ಆಸ್ಪತ್ರೆ ಗೆ ದಾಖಲು
ಬಿಜೆಪಿ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ :ವಿಜಯೇಂದ್ರಗೆ ನಿರಾಸೆ
ವಿಸ್ಮಯ ಪ್ರಕರಣ: ಕಿರಣ್ ಕುಮಾರ್ ಗೆ 10 ವರ್ಷ ಜೈಲು | 12 ಲಕ್ಷ ದಂಡ
ಶೂಟಿಂಗ್ ವೇಳೆ ನದಿಗೆ ಬಿದ್ದ ಕಾರು: ನಟಿ ಸಮಂತಾ, ವಿಜಯದೇವರಕೊಂಡ ಇದ್ದ ಕಾರು