ಹಿಂದೂಗಳ ಮೇಲೆ, ರಾಮನ ಮೇಲೆ ನಿಮಗೇಕಿಷ್ಟು ಕೋಪ?: ಕಾಂಗ್ರೆಸ್ ಗೆ ಹಾರ್ದಿಕ್ ಪಟೇಲ್ ಪ್ರಶ್ನೆ
ನವದೆಹಲಿ: ಹಿಂದೂಗಳ ಹಾಗೂ ಭಗವಾನ್ ರಾಮನ ವಿರುದ್ಧ ನಿಮಗೆ ಯಾಕೆ ಇಷ್ಟು ದ್ವೇಷ ಎಂದು ಕಾಂಗ್ರೆಸ್ ಪಕ್ಷವನ್ನು ತೊರೆದ ಯುವ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಮಮಂದಿರದ ಇಟ್ಟಿಗೆಗಳ ಮೇಲೆ ನಾಯಿ ಮೂತ್ರ ವಿಸರ್ಜಿಸಿದ ಫೋಟೊವನ್ನು ಗುಜರಾತ್ ನ ಕಾಂಗ್ರೆಸ್ ಮುಖಂಡನೊಬ್ಬ ಟ್ವೀಟ್ ಮಾಡಿದ್ದು, ಇದನ್ನು ಕಟುವಾಗಿ ಟೀಕಿಸಿರುವ ಹಾರ್ದಿಕ್ ಪಟೇಲ್, ಪ್ರತಿ ಬಾರಿಯೂ ಹಿಂದೂಗಳ ಭಾವನೆಗೆ ಯಾಕೆ ನೋವನ್ನು ಉಂಟು ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದೂ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಅಷ್ಟೇ ಅಲ್ಲ ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹಿಂದೆಯೂ ನಾನು ಹೇಳಿದ್ದೆ. ಇಂದು ಕೂಡಾ ಕಾಂಗ್ರೆಸ್ ಮುಖಂಡರೊಬ್ಬರು ರಾಮಮಂದಿರದ ವಿಚಾರದಲ್ಲಿ ಟ್ವೀಟ್ ಮಾಡಿರುವುದು ಕೂಡಾ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹದ್ದೇ ಆಗಿದೆ ಎಂದು ಪಟೇಲ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಹಾರ್ದಿಕ್ ಪಟೇಲ್ ಇದೀಗ ಯಾವ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಸದ್ಯ ಅವರು ನೀಡಿರುವ ಹೇಳಿಕೆ ಬಿಜೆಪಿಯನ್ನು ಸೆಳೆಯುವ ತಂತ್ರವೂ ಆಗಿರಬಹುದು ಎಂದು ರಾಜಕೀಯ ವಿಶ್ಲೇಷಣೆ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು