ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವಂತಿಲ್ಲ: ಯೋಗಿ ಸರ್ಕಾರದಿಂದ ಖಡಕ್ ಆದೇಶ
ಲಕ್ನೋ : ಉತ್ತರ ಪ್ರದೇಶದಲ್ಲಿ, ಸುರಕ್ಷಿತ ಕೆಲಸದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಕಾರ್ಖಾನೆಗಳಲ್ಲಿ ಮಹಿಳೆಯರು ರಾತ್ರಿ ಪಾಳಿಯಲ್ಲಿ ತೊಡಗಿಸಿಕೊಳ್ಳುವುದನ್ನು ನಿಷೇಧಿಸಿ ಯೋಗಿ ಆದಿತ್ಯಾನಾಥ್ ನೇತೃತ್ವದ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸತತ ಎರಡನೇ ಬಾರಿಗೆ ಗೆಲುವು ಸಾಧಿಸಿದೆ. ಅವರ ಅವಧಿಯಲ್ಲಿ ಹಲವಾರು ನಿಯಮ ಜಾರಿಯಲ್ಲಿದೆ. ವಿವಿಧ ಕ್ರಮಗಳನ್ನೂ ಕೈಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ರಾತ್ರಿ ವೇಳೆ ಕಾರ್ಖಾನೆಯಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮಹಿಳಾ ಕಾರ್ಮಿಕರ ಲಿಖಿತ ಅನುಮತಿಯಿಲ್ಲದೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಕೆಲಸ ಮಾಡಲು ಅವಕಾಶ ನೀಡಬಾರದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ಅಂತಹ ಸಮಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಉಚಿತ ಸಾರಿಗೆ, ಆಹಾರ ಮತ್ತು ಸಾಕಷ್ಟು ಮೇಲ್ವಿಚಾರಣೆಯನ್ನು ಒದಗಿಸುವಂತೆ ಸಲಹೆ ನೀಡಲಾಗಿದೆ.
ಅದೇ ರೀತಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಲಸ ಮಾಡಲು ನಿರಾಕರಿಸುವ ಮಹಿಳೆಯರನ್ನು ಕೆಲಸದಿಂದ ವಜಾ ಮಾಡಬಾರದು ಎಂದು ತಿಳಿಸಲಾಗಿದೆ. ಯುಪಿಯ ಎಲ್ಲಾ ಗಿರಣಿಗಳು ಮತ್ತು ಕಾರ್ಖಾನೆಗಳಲ್ಲಿ ಮಹಿಳೆಯರಿಗೆ ಕೆಲಸದ ವಾತಾವರಣದಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ವಿನಾಯಿತಿಗಳನ್ನು ಜಾರಿಗೆ ತರಲು ಸೂಚನೆಯನ್ನು ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಜಾತ್ರೆಯಲ್ಲಿ ಪಾನಿಪುರಿ ಸೇವಿಸಿದ 97 ಮಕ್ಕಳು ಅಸ್ವಸ್ಥ
ಪೊಲೀಸರ ರೈಫಲ್ ಗಳ ಬಿಗಿ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಪ್ರವೇಶಿಸಿದ ದಲಿತ ಮಹಿಳೆಯರು!