ಹಾಡು ಕೊನೆಗೊಳಿಸುತ್ತಿದ್ದಂತೆಯೇ ವೇದಿಕೆಯಲ್ಲೇ ಪ್ರಾಣ ಬಿಟ್ಟ ಖ್ಯಾತ ಗಾಯಕ - Mahanayaka
8:33 PM Wednesday 5 - February 2025

ಹಾಡು ಕೊನೆಗೊಳಿಸುತ್ತಿದ್ದಂತೆಯೇ ವೇದಿಕೆಯಲ್ಲೇ ಪ್ರಾಣ ಬಿಟ್ಟ ಖ್ಯಾತ ಗಾಯಕ

29/05/2022

ಹಾಡು ಹಾಡುತ್ತಲೇ ಖ್ಯಾತ ಗಾಯಕರೊಬ್ಬರು ತಮ್ಮ ಜೀವನದ ಪಯಣವನ್ನು ಮುಗಿಸಿದ ಘಟನೆ ಕೇರಳದಲ್ಲಿ ನಡೆದಿದ್ದು, ತನ್ನ ಹಾಡು ಮುಗಿಯುತ್ತಿದ್ದಂತೆಯೇ ವೇದಿಕೆಯಲ್ಲೇ ಕುಸಿದು ಬಿದ್ದು ನಿಧನರಾಗಿದ್ದಾರೆ.

ಕೇರಳದ ಮಲಯಾಳಂ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದ, ಖ್ಯಾತ ಗಾಯಕ ಎಡವ ಬಶೀರ್ ಮೃತಪಟ್ಟವರಾಗಿದ್ದು, ತಮ್ಮ ಹಾಡು ಕೊನೆಗೊಳ್ಳುವವರೆಗೂ ಅವರು ತಮ್ಮ ಉಸಿರು ಬಿಗಿದಿಟ್ಟುಕೊಂಡಿದ್ದಾರೆ. ಹಾಡು ಕೊನೆಗೊಳ್ಳುತ್ತಿದ್ದಂತೆಯೇ ವೇದಿಕೆಯಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.

ಬ್ಲೂ ಡೈಮಂಡ್ ಆರ್ಕೆಸ್ಟ್ರಾದ ಸುವರ್ಣ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ಯೇಸುದಾಸ್ ಮತ್ತು ಮುಹಮ್ಮದ್ ರಫಿ ಅವರ ಹಾಡುಗಳಿಂದ ಬಶೀರ್ ಜನರ ಹೃದಯ ಗೆದ್ದಿದ್ದರು. ಹಲವಾರು ಸಂಗೀತ ಕಾರ್ಯಕ್ರಮಗಳಲ್ಲಿ ಬಶೀರ್ ಸಂಗೀತ ಪ್ರೇಮಿಗಳ ಪ್ರಮುಖ ಆಕರ್ಷಣೆಯ ಗಾಯಕರಾಗಿದ್ದರು.

ಹಾಡುಕೊನೆಗೊಳ್ಳುತ್ತಿದ್ದಂತೆಯೇ ಬಶೀರ್ ಕುಸಿದು ಬಿದ್ದಿದ್ದಾರೆ. ಈ ವೇಳೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮಾ.ಹರೀಶ್ ಆಯ್ಕೆ

ವೆಸ್ಟ್ ನೈಲ್ ಜ್ವರ ವ್ಯಕ್ತಿ ಸಾವು: ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ

ನಾಲ್ವರು ಭಾರತೀಯರ ಸಹಿತ 22 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ವಿಮಾನ ನಾಪತ್ತೆ!

19 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

ಇತ್ತೀಚಿನ ಸುದ್ದಿ