ಆ್ಯಂಬುಲೆನ್ಸ್-ಟ್ರಕ್ ನಡುವೆ ಭೀಕರ ಅಪಘಾತ: ರೋಗಿ ಸಹಿತ 7 ಮಂದಿ ಸಾವು
ಬರೇಲಿ: ಆಂಬ್ಯುಲೆನ್ಸ್ ವೊಂದು ಡಿವೈಡರ್ ಡಿಕ್ಕಿಯಾದ ಪರಿಣಾಮ 7 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಬರೇಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ದೆಹಲಿಯ ಪಹರ್ ಗಂಜ್‌ನಿಂದ ಪಿಲಿಭಿತ್ ಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿವೈಡರ್ ಡಿಕ್ಕಿಯಾಗಿದ್ದು, ಬಳಿಕ ಎದುರಿನಿಂದ ಬರುತ್ತಿದ್ದ ಮಿನಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಸಹಿತ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಭೋಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯ,ರಾಂಪುರ ಗ್ರಾಮದ ನಿವಾಸಿ ಮೆಹದಿ ಹಸನ್ ಆಂಬ್ಯುಲೆನ್ಸ್ ಚಾಲಕ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಆ್ಯಂಬುಲೆನ್ಸ್ ಚಾಲಕ ನಿದ್ರೆಗೆ ಜಾರಿದ ಕಾರಣ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಪಿಲಿಭಿತ್ ನಿವಾಸಿಗಳೆಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ ಸಂಪೂರ್ಣ ನೆರವು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
9 ವರ್ಷದಿಂದ ಪ್ರೀತಿಸಿದವಳು ಮೋಸ ಮಾಡಿದಳು: ಆತ್ಮಹತ್ಯೆಗೆ ಶರಣಾದ ಯುವಕ
ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆ
ಆರ್ಯನ್ ಖಾನ್ ಪ್ರಕರಣದ ವಿವಾದಿತ ಅಧಿಕಾರಿ ಸಮೀರ್ ವಾಂಖೆಡೆ ವರ್ಗಾವಣೆಯಾಗಿದ್ದೆಲ್ಲಿಗೆ?
ಪತಿ ಜೊತೆ ಜಗಳ: ತನ್ನ ಆರು ಮಕ್ಕಳನ್ನು ಬಾವಿಗೆಸೆದ ಪಾಪಿ ತಾಯಿ!
ಹಣ ನೀಡಿ ನಿಮ್ಮನ್ನು ಸಚಿವರಾಗಿ ಮಾಡ್ತೇವೆ ಅಂದಿದ್ರು: ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ