ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 7 ಮಂದಿ ಸಜೀವ ದಹನ
ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ, ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ವೊಂದು ಹೊತ್ತಿ ಉರಿದ ಪರಿಣಾಮ 7 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
35 ಜನರಿದ್ದ ಬಸ್ ಗೋವಾದಿಂದ ಹೈದರಾಬಾದಿಗೆ ಹೋಗುತ್ತಿತ್ತು. ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ
ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 7 ಪ್ರಯಾಣಿಕರು ಸಾವನ್ನಪ್ಪಿದ್ದು ಈ ದುರಂತದಲ್ಲಿ 12 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಸೀದಿ ವಿವಾದ: ಜೂನ್ 4ರಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ
ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಹಿಂದುತ್ವ ಹೋರಾಟಗಾರರಿಗೆ ಮೋಹನ್ ಭಾಗವತ್ ತಿರುಗೇಟು
ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್
ಪುಷ್ಪ ಸಿನಿಮಾ ಸ್ಟೈಲ್ ನಲ್ಲಿ ರಕ್ತ ಚಂದನ ಸಾಗಾಟ: ಎಮ್ಮೆಯಿಂದಾಗಿ ಸಿಕ್ಕಿಬಿದ್ದ ಕಳ್ಳರು!