ಸೌತಡ್ಕ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ!
ಮಂಗಳೂರು: ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯಕ್ಕೆ ಅನ್ಯಕೋಮಿನವರ ನಿರ್ಬಂಧ ಹೇರಲಾಗಿದ್ದು, ದೇವಸ್ಥಾನದ ಮುಂಭಾಗವೇ ಈ ಸಂಬಂಧ ಬ್ಯಾನರ್ ಹಾಕಿದ್ದಾರೆ. ಹಿಂದೂಯೇತರ ಅನ್ಯಕೋಮಿನ ಆಟೋ, ಟಾಕ್ಸಿ ಸೇರಿದಂತೆ ಇತರೆ ವಾಹನಗಳಿಗೆ ನಿಷೇಧ ಹೇರಲಾಗಿದೆ.
ಹಿಂದೂಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಮತ್ತು ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರ ಆಟೋ, ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.
ಆದರೆ ಸೌತಡ್ಕ ಗಣಪತಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ಆಡಳಿತ ಮಂಡಳಿ ಫಲಕ ಹಾಕಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆ ಭಜರಂಗದಳದ ಹೆಸರಿನಲ್ಲಿ ಈ ಫಲಕ ಹಾಕಿದ್ದು ಕೆಲ ದಿನಗಳ ಹಿಂದೆ ಇಲ್ಲಿ ಮುಸ್ಲಿಂ ಯುವಕನೊಬ್ಬ ಲವ್ ಜಿಹಾದ್ ಎಸಗಿದ್ದ ಎಂದು ಆರೋಪಿಸಿ ಈ ಬ್ಯಾನರ್ ಅಳವಡಿಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರೈತ ಮುಷ್ಕರದ ಪ್ರಭಾವವೂ ಆಳುವವರ ಕುತಂತ್ರಗಳೂ
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ
ಆಂಧ್ರಪ್ರದೇಶದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ, ನಿರ್ವಾಹಕನಿಗೆ ಮಾರಣಾಂತಿಕ ಹಲ್ಲೆ!
ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 7 ಮಂದಿ ಸಜೀವ ದಹನ
ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಡಾ.ಕೆ.ಟಿ.ಜಲೀಲ್