ನೋಟಿನ ಮೇಲೆ ಗಾಂಧೀಜಿ ಜೊತೆಗೆ ಟ್ಯಾಗೋರ್ ಮತ್ತು ಅಬ್ದುಲ್ ಕಲಾಂ ಹೆಸರು!
ನವದೆಹಲಿ: ದೇಶದ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರದ ಜೊತೆಗೆ ರವೀಂದ್ರನಾಥ ಠಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿವೆ.
ವರದಿಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ವಿಷಯವನ್ನು ಪರಿಶೀಲಿಸಲು ಮಾತುಕತೆ ನಡೆಸುತ್ತಿದೆ. ಮಹಾತ್ಮಾ ಗಾಂಧಿ ಹೊರತುಪಡಿಸಿ ಇತರ ಗಣ್ಯರನ್ನು ನೋಟುಗಳಿಗಾಗಿ ಪರಿಗಣಿಸುತ್ತಿರುವುದು ಇದೇ ಮೊದಲು.
ವರದಿಯ ಪ್ರಕಾರ, ಆರ್‌ಬಿಐ ಮತ್ತು ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಗಾಂಧಿ ಟ್ಯಾಗೋರ್ ಮತ್ತು ಕಲಾಂ ವಾಟರ್‌ಮಾರ್ಕ್‌ಗಳ ಎರಡು ಪ್ರತ್ಯೇಕ ಸೆಟ್ ಮಾದರಿಗಳನ್ನು ದೆಹಲಿಯ ಐಐಟಿ ಎಮರಿಟ್ಸ್ ಪ್ರೊಫೆಸರ್ ದಿಲೀಪ್ ಟಿ. ಶಹಾನಿ ಅವರಿಗೆ ಕಳುಹಿಸಲಾಗಿದೆ ಎಂದು ವರದಿಯಲ್ಲಿ ಹೇಳಿದೆ.
ಆಯ್ಕೆಯಾದ ಮಾದರಿಯನ್ನು ಸರ್ಕಾರವು ಅಂತಿಮ ಪರಿಗಣನೆಗೆ ತೆಗೆದುಕೊಳ್ಳುತ್ತದೆ ಮತ್ತು ಅಂತಿಮ ನಿರ್ಧಾರವನ್ನು ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗುವುದು ಎಂದು ವರದಿ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅತ್ಯಾಚಾರಕ್ಕೊಳಗಾದ ಬಾಲಕಿಯ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ ಶಾಸಕ!: ಕಾಂಗ್ರೆಸ್ ಕಿಡಿ
ಕೆಟ್ಟುನಿಂತ 12 ಚಕ್ರದ ಲಾರಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಬರ್ಬರ ಹತ್ಯೆ!