ತರಗತಿಯಲ್ಲೇ ನಿದ್ದೆ ಹೋದ ಶಿಕ್ಷಕಿಗೆ ಬೀಸಣಿಗೆಯಲ್ಲಿ ಗಾಳಿ ಬೀಸಿದ ವಿದ್ಯಾರ್ಥಿನಿ!
ಬಿಹಾರ: ತರಗತಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ಮಕ್ಕಳ ಎದುರೇ ನಿದ್ದೆಗೆ ಜಾರಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶಿಕ್ಷಕಿಯು ಕುರ್ಚಿಯ ಮೇಲೆ ಕುಳಿತು ಗಾಢ ನಿದ್ದೆ ಮಾಡುತ್ತಿದ್ದರೆ, ಶಾಲಾ ವಿದ್ಯಾರ್ಥಿನಿ ಯೋರ್ವಳು ಬೀಸಣಿಕೆಯಲ್ಲಿ ಮಲಗಿರುವ ಶಿಕ್ಷಕಿಗೆ ಗಾಳಿ ಬೀಸುತ್ತಿದ್ದಾಳೆ. ತರಗತಿಯಲ್ಲಿದ್ದ ಇತರೆ ವಿದ್ಯಾರ್ಥಿಗಳು ಸುಮ್ಮನೇ ಕುಳಿತಿರುವುದನ್ನು ಕಾಣಬಹುದಾಗಿದೆ.
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಿ ಪುರೈನಾ ಗ್ರಾಮದ ಕತರ್ವಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು ಘಟನೆಯು ತಡವಾಗಿ ಬೆಳಕಿಗೆ ಬಂದಿದೆ.
ಸಾಕಷ್ಟು ಸೋಶಿಯಲ್ ಮೀಡಿಯಾ ಬಳಕೆದಾರರು ಕೆಲಸದ ಸ್ಥಳದಲ್ಲಿ ನಿದ್ದೆ ಮಾಡಿರುವ ಶಿಕ್ಷಕಿಯ ವರ್ತನೆಗೆ ಹಿಡಿಶಾಪ ಹಾಕಿದ್ದಾರೆ. ಇಂತಹ ಶಿಕ್ಷಕಿಯನ್ನು ಅಮಾನತು ಗೊಳಿಸಬೇಕೆಂದು ಅಸಮಾಧಾನ ಹೊರ ಹಾಕಿದ್ದಾರೆ.
ಶಿಕ್ಷಕಿಯನ್ನು ಬಬಿತಾ ಕುಮಾರಿ ಎಂದು ಗುರುತಿಸಲಾಗಿದೆ. ತರಗತಿಯಲ್ಲಿ ಏಕೆ ನಿದ್ದೆ ಮಾಡುತ್ತಿದ್ದೀರಿ ಎಂದು ಕೇಳಿದ್ದಕ್ಕೆ ಶಿಕ್ಷಕಿಯು ನನಗೆ ಹುಷಾರಿಲ್ಲದ ಕಾರಣ ನಾನು ತರಗತಿಯಲ್ಲಿ ಕುರ್ಚಿಯ ಮೇಲೆ ನಿದ್ರಿಸುತ್ತೇನೆ ಎಂದು ಕಾರಣ ನೀಡಿದ್ದಾರೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?
ಮಂಗಳೂರು ಸೇರಿದಂತೆ ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ
ಪತ್ನಿ ರುಚಿಕರ ಅಡುಗೆ ಮಾಡಿಕೊಡುವುದಿಲ್ಲ ಎಂದು ಪತಿ ಆತ್ಮಹತ್ಯೆಗೆ ಶರಣು