ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಹಂಸಲೇಖ ಮಹತ್ವದ ಹೇಳಿಕೆ!
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ವ್ಯಕ್ತಿಗಳಿಗೆ ಅಪಮಾನ ಮಾಡಿದೆ. ಹೀಗಾಗಿ ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ ಇಂದು ತೀರ್ಥಹಳ್ಳಿ ತಾಲ್ಲೂಕಿನ ಕವಿಶೈಲದಿಂದ ಪಾದಯಾತ್ರೆ ಆರಂಭಿಸಲಾಗಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭಗೊಂಡಿದ್ದು, ಇದರಲ್ಲಿ ಭಾಗವಹಿಸಿದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕುವೆಂಪು ಅಂದ್ರೆ ಕನ್ನಡ, ಬಸವಣ್ಣ ಅಂದ್ರೆ ಕರ್ನಾಟಕ. ಈಗ ಅವರುಗಳಿಗೇ ಕುತ್ತು ಬಂದಿದೆ ಅಂದಮೇಲೆ ನಾವಿದ್ದು ಮಾಡುವುದೇನು ಎಂದು ಸರ್ಕಾರದ ಹೊಸ ನೀತಿಯನ್ನು ಪ್ರಶ್ನಿಸಿದ್ದಾರೆ.
ಈ ಹಿಂದೆ ಗೋಕಾಕ್ ಚಳುವಳಿ ನಡೆದಿತ್ತು. ಈಗ ಕುಪ್ಪಳ್ಳಿಯಿಂದ ಕನ್ನಡದ ಕಹಳೆ ಆರಂಭವಾಗಿದೆ ಎಂದ ಹಂಸಲೇಖ, ಇದು ನಾಡಿನಾದ್ಯಂತ ಮೊಳಗಬೇಕಿದೆ. ನಮ್ಮ ನಾಡು, ನಾಡಗೀತೆ ಎರಡಕ್ಕೂ ಅವಮಾನವಾಗಿದೆ. ಹೀಗಾಗಿ ಇದರ ವಿರುದ್ಧ ನಿರಂತರ ಹೋರಾಟ ನಡೆಯಬೇಕಾಗಿದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯೋಗ ದಿನ: ಮೈಸೂರು ಮಹಾರಾಜರಿಗೆ ಆಹ್ವಾನ ಯಾಕಿಲ್ಲ? | ಪ್ರತಾಪ್ ಸಿಂಹ ಹೇಳಿದ್ದೇನು?
ಕುಡುಕ ತಂದೆಗೆ ಹೆದರಿ ತೋಟದಲ್ಲಿ ಅಡಗಿ ಕುಳಿತ ಬಾಲಕಿ ಹಾವು ಕಡಿದು ಸಾವು!
ರಸ್ತೆಗೆ ಉರುಳಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು