ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಫಲಿತಾಂಶ ನೋಡುವುದು ಹೇಗೆ?

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ಅಧಿಕೃತ ಫಲಿತಾಂಶ ದೊರೆಯಲಿದ್ದು, ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಫಲಿತಾಂಶವನ್ನು(Karnataka PUC II Results) ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://karresult.nic.in/ ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಗೂಗಲ್ ಸರ್ಚ್ ನಲ್ಲಿ ಮೇಲಿನ ವೆಬ್ ಅಡ್ರೆಸ್ ನ್ನು ಸರ್ಚ್ ಮಾಡಿದರೆ, ವೆಬ್ ಸೈಟ್ ನಲ್ಲಿ ನಿಮ್ಮ ಫಲಿತಾಂಶವನ್ನು ಪಡೆದುಕೊಳ್ಳಬಹುದು. ಮೊಬೈಲ್ ನಲ್ಲೇ ನಿಮ್ಮ ಫಲಿತಾಂಶವನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ನೀಡಲಾಗಿರುವ ರಿಜಿಸ್ಟರ್ ಮಾಡಿರುವ ಮೊಬೈಲ್ ನಂಬರ್‌ಗೆ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಲಿದೆ ಎನ್ನಲಾಗಿದೆ.
ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಬಹಿಷ್ಕಾರಕ್ಕೆ ಬಲಪಂಥೀಯರ ಕರೆ!
ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿಯ ಅನುಮಾನಾಸ್ಪದ ಸಾವು!
ಮಗುವಿಗೆ ಅರಿಶಿಣ ಕುಂಕುಮ ಬಲವಂತವಾಗಿ ತಿನ್ನಿಸಿದ ತಂದೆ: ಬಾಲಕಿಯ ಸ್ಥಿತಿ ಚಿಂತಾಜನಕ