ಯೋಗ ದಿನಾಚರಣೆ ಹಿನ್ನೆಲೆ ಇಂದು ಶಾಲೆಗಳಿಗೆ ಅರ್ಧ ದಿನ ರಜೆ! - Mahanayaka
6:06 AM Thursday 12 - December 2024

ಯೋಗ ದಿನಾಚರಣೆ ಹಿನ್ನೆಲೆ ಇಂದು ಶಾಲೆಗಳಿಗೆ ಅರ್ಧ ದಿನ ರಜೆ!

yoga
21/06/2022

ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.

ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರುಗಳು, ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ನಡೆಸಲು ಸೂಚಿಸಲಾಗಿದೆ.

ಜೂನ್ 21ಕ್ಕೆ ಅರ್ಧದಿನ ಶಾಲೆಗಳಿಗೆ ರಜೆಯನ್ನು ಘೋಷಿಸಿರುವುದರಿಂದ ಆ ದಿನದ ಬದಲು ಜೂನ್ 25ರಂದು ಶನಿವಾರ ಪೂರ್ಣಪ್ರಮಾಣದ ಶಾಲೆಯನ್ನು ನಡೆಸಲು ಶಿಕ್ಷಣ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾಸಕ ರಾಮ್ ದಾಸ್ ಬೆನ್ನಿಗೆ ಗುದ್ದುವಷ್ಟು ಪ್ರೀತಿ ಮೋದಿಜಿಗೆ ಯಾಕೆ?: ರಾಮ್ ದಾಸ್ ಏನು ಹೇಳಿದ್ರು?

ಆಕ್ಸಿಜನ್ ಕೊಡೋಕೆ ಆಗದವರು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ ಟೀಕೆ

ತಾಯಿ ಕೋತಿಯನ್ನು ಬೇಟೆಯಾಡಿದ ಚಿರತೆ: ತಾಯಿ ಎದೆ ಅಪ್ಪಿಕೊಂಡೇ ಇದ್ದ ಮರಿ ಕೋತಿ

ಪ್ರವಾಹ ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸರು ಸಾವು!

ಪ್ರತಿಮೆಗಳ ಜೊತೆಗೆ ಇವರು ಹೇಗೆಲ್ಲ ಫೋಟೋ ತೆಗೆದುಕೊಳ್ಳುತ್ತಾರೆ ನೋಡಿ!

ಇತ್ತೀಚಿನ ಸುದ್ದಿ