ನಾಲೆಗೆ ಉರುಳಿದ ಕ್ರೂಸರ್ ವಾಹನ: 8 ಮಂದಿ ಸ್ಥಳದಲ್ಲೇ ಸಾವು - Mahanayaka
11:07 AM Wednesday 12 - March 2025

ನಾಲೆಗೆ ಉರುಳಿದ ಕ್ರೂಸರ್ ವಾಹನ: 8 ಮಂದಿ ಸ್ಥಳದಲ್ಲೇ ಸಾವು

belagavi
26/06/2022

ಬೆಳಗಾವಿ:  ಕ್ರೂಸರ್ ವಾಹನವೊಂದು ಬಳ್ಳಾರಿ ನಾಲೆಗೆ  ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಭಾನುವಾರ ನಡೆದಿದೆ.

ಕ್ರೂಸರ್ ವಾಹನ ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು.  ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ನಾಲೆಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

ವಾಹನದಲ್ಲಿ ದಿನಗೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು.  ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದರೆ, ಮೂರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದು ಮಾರಿಹಾಳ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Provided by

ಸ್ಥಳಕ್ಕೆ ಬೆಳಗಾವಿ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತ್ನಿಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಆಸ್ಪತ್ರೆಗೆ ಓಡಿ ಬಂದ ಪತಿ: ಬೆಚ್ಚಿಬಿದ್ದ ವೈದ್ಯರು!

ಮಗುಚಿ ಬಿದ್ದ ಬೈಕ್ ಗೆ ಹತ್ತಿಕೊಂಡ ಬೆಂಕಿ: ಇಬ್ಬರು ಸವಾರರಿಗೆ ತೀವ್ರ ಗಾಯ

ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್ ಪಿ ಬೆಂಬಲ

ತರಕಾರಿ ಮಾರಾಟದ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್

ತಾಯಿ, ಇಬ್ಬರು ಮಕ್ಕಳ ಕೊಲೆ ‌ಪ್ರಕರಣ:  ಆರೋಪಿ ಪ್ರವೀಣ್ ಭಟ್ ನಿರ್ದೋಷಿ- ಹೈಕೋರ್ಟ್

ಇತ್ತೀಚಿನ ಸುದ್ದಿ