ತಾಯಿ ಮಗಳ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ: ಕೃತ್ಯದ ಬಳಿಕ ಕಾಲುವೆಗೆ ಎಸೆದ ಪಾಪಿಗಳು
ಉತ್ತರಾಖಂಡ: ಉತ್ತರಾಖಂಡದ ರೂರ್ಕಿಯಲ್ಲಿ ಯುವತಿ ಮತ್ತು ಆಕೆಯ ಆರು ವರ್ಷದ ಮಗಳ ಮೆಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿ ಮನೆಗೆ ಮರಳುತ್ತಿದ್ದವರನ್ನು ಆರೋಪಿಗಳು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ ಚಲಿಸುತ್ತಿದ್ದ ಕಾರಿನಲ್ಲಿಯೆ ಅತ್ಯಾಚಾರ ನಡೆಸಿ ಇಬ್ಬರನ್ನು ಕಾಲುವೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ.
ಯುವತಿ ತನ್ನ ಮಗಳೊಂದಿಗೆ ಮುಸ್ಲಿಂ ಧಾರ್ಮಿಕ ಕೇಂದ್ರವಾದ ಪಿರಾನ್ ಕಲಿಯಾರ್‌ನಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಗುಂಪೊಂದು ಇಬ್ಬರನ್ನು ಬಲವಂತವಾಗಿ ಕಾರಿನೊಳಗೆ ಹತ್ತಿಸಿ ಚಲಿಸುತ್ತಿದ್ದ ಕಾರಿನಲ್ಲೆ ತಾಯಿ ಮತ್ತು ಮಗುವಿನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಲಾಗಿದ್ದು, ಬಳಿಕ ಇಬ್ಬರನ್ನೂ ಹೊಡೆದು ಹಾಕಿ ಕಾಲುವೆಗೆ ಎಸೆದಿದ್ದಾರೆ.
ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆ ಹೇಗೋ ಪೊಲೀಸ್ ಠಾಣೆಗೆ ತಲುಪಿ ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆ ಸಂಬಂಧ ಪೋಕ್ಸೋ ಕಾಯ್ದೆಯಡಿಯಲ್ಲಿ ಅಪರಿಚಿತರ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಗಳ ಪೈಕಿ ಓರ್ವನ ಹೆಸರು ಸೋನು ಎಂದು ಸಂತ್ರಸ್ತೆ ತಿಳಿಸಿದ್ದಾರೆ.
ಇಬ್ಬರು ಸಂತ್ರಸ್ತರನ್ನೂ ರೂರ್ಕಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮದುವೆ ನಡೆದು ಕೆಲವೇ ಗಂಟೆಗಳಲ್ಲಿ ವರ ಸಾವು!
ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ: ಮದ್ರಸ ಶಿಕ್ಷಕ ಅರೆಸ್ಟ್
ನಡು ರಸ್ತೆಯಲ್ಲಿ ವಿದ್ಯಾರ್ಥಿನಿಯ ಶಿರಚ್ಛೇದಿಸಿದ ಪಾಗಲ್ ಪ್ರೇಮಿ: ಮದುವೆಗೆ ಒಪ್ಪದಿದ್ದರೆ ಕೊಲ್ಲುವುದೇ?
ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಡಿಕ್ಕಿ ಹೊಡೆದ ಹಕ್ಕಿ!