ಟ್ರಕ್ ನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ 46 ಕಾರ್ಮಿಕರು! - Mahanayaka
2:03 AM Wednesday 5 - February 2025

ಟ್ರಕ್ ನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ 46 ಕಾರ್ಮಿಕರು!

mexico
28/06/2022

ಮೆಕ್ಸಿಕೋ: ಸುಮಾರು 46 ವಲಸೆ ಕಾರ್ಮಿಕರ ಮೃತದೇಹ ಟ್ರಕ್ ವೊಂದರಲ್ಲಿ ಪತ್ತೆಯಾಗಿರುವ ಆತಂಕಕಾರಿ ಘಟನೆ ಅಮೆರಿಕದ ಟೆಕ್ಸಾಸ್​ನಲ್ಲಿರುವ ಸ್ಯಾನ್​ ಆಂಟೋನಿಯೋ ನಗರದಲ್ಲಿ ನಡೆದಿದೆ.

ಮೆಕ್ಸಿಕೋ ಗಡಿಯಲ್ಲಿ ನಡೆಯುತ್ತಿರುವ  ಮಾನವ ಕಳ್ಳಸಾಗಾಣೆಯ ಭಯಾನಕ ಘಟನೆ ಇದಾಗಿದ್ದು, ಟ್ರಕ್ ಟ್ರೈಲರ್ ನೊಳಗೆ ವಲಸೆ ಕಾರ್ಮಿಕರನ್ನು ಹಾಕಿಕೊಂಡು ಹೋಗುತ್ತಿದ್ದ ವೇಳೆ ಉಸಿರುಗಟ್ಟಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸ್ಯಾನ್​ ಆಂಟೋನಿಯೋದ ದಕ್ಷಿಣ ಹೊರವಲಯದ ನಿರ್ಜನ ಪ್ರದೇಶದಲ್ಲಿರುವ ರೈಲ್ವೆ ಹಳಿಗಳ ಪಕ್ಕದಲ್ಲಿ ಈ ಟ್ರಕ್ ಪತ್ತೆಯಾಗಿದೆ. ಬಿಸಿಲಿನ ತಾಪ ಹೆಚ್ಚಾಗಿ ಟ್ರಕ್ ನೊಳಗೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಟ್ರಕ್ ನೊಳಗೆ ಮೃತಪಟ್ಟವರ ಪೈಕಿ ನಾಲ್ವರು ಅಪ್ರಾಪ್ತ ವಯಸ್ಕರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಸಂತ್ರಸ್ತರು ಯಾವ ದೇಶದವರು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಮತ ನೀಡಿ ನಿಮ್ಮ ಮತ ವ್ಯರ್ಥ ಮಾಡಬೇಡಿ: ಅಸಾದುದ್ದೀನ್ ಓವೈಸಿ

ಅಂಬೇಡ್ಕರ್‌ ಸಮಾಜ ಸೇವಾ ಸಂಘದಿಂದ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನ

ತಾಯಿ ಮಗಳ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ: ಕೃತ್ಯದ ಬಳಿಕ ಕಾಲುವೆಗೆ ಎಸೆದ ಪಾಪಿಗಳು

ಫ್ಯಾಶನ್ ಬ್ಲಾಗರ್ ಳನ್ನು ಕೈಕಾಲು ಕಟ್ಟಿ ಕಟ್ಟಡದಿಂದ ಕೆಳಗೆಸೆದ ಪತಿ!

ತರಕಾರಿ ಮಾರಾಟದ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್

 

ಇತ್ತೀಚಿನ ಸುದ್ದಿ