ಕಾರಿಗೆ ಕಂಟೈನರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ವಾಹನ ನಜ್ಜುಗುಜ್ಜು! - Mahanayaka

ಕಾರಿಗೆ ಕಂಟೈನರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ವಾಹನ ನಜ್ಜುಗುಜ್ಜು!

belagavi road accident
03/07/2022

ಬೆಳಗಾವಿ: ಕಾರು ಮತ್ತು‌ ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರ ತಾಲೂಕಿನ ನಾಗರಗಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ

ಗೋವಾಗೆ ಹೊರಟಿದ್ದ ಯುವಕರು ಪ್ರಯಾಣಿಸುತ್ತಿದ್ದ ಕಾರಿಗೆ  ಕಂಟೈನರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಾರು ಚಾಲಕ ಧಾರವಾಡ ಜಿಲ್ಲೆಯ ಸಾಗರ್ ಬಿಡಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಯುವಕ ವಿಠ್ಠಲ ಕಾಕಡೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಅಳ್ನಾವರದ ಗಿರೀಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರಮಾಕಾಂತ್ ಪಾಲ್ಕರ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಖಾನಾಪೂರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ ನೀಡಿ ದೂರು ದಾಖಲು ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೊಟೇಲ್ ನಲ್ಲಿ ಜೊತೆಗಿದ್ದ ನರೇಶ್, ಪವಿತ್ರಾ ಲೋಕೇಶ್ ಮೇಲೆ ನರೇಶ್ ಪತ್ನಿಯಿಂದ ಹಲ್ಲೆಗೆ ಯತ್ನ!

ಲೈಂಗಿಕ ಕಿರುಕುಳ ಪ್ರಕರಣ:  ಮಾಜಿ ಶಾಸಕ ಪಿ.ಸಿ.ಜಾರ್ಜ್ ಬಂಧನ

ತಾಯಿಗೆ ಕರೆ ಮಾಡಿ ಕಿರುಕುಳ ನೀಡಿದವನಿಗೆ ಚಾಕುವಿನಿಂದ ಇರಿದ ಸಹೋದರರು!

ಅನಾರೋಗ್ಯದಿಂದ ಬೇಸತ್ತು ಪುಟ್ಟ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ನಟಿ ಪವಿತ್ರ ಲೋಕೇಶ್ 3ನೇ ಮದುವೆಯ ವದಂತಿ: ಕಾನೂನು ಸಮರಕ್ಕೆ ಮುಂದಾದ ನಟಿ

ಇತ್ತೀಚಿನ ಸುದ್ದಿ