ಯುವಕನನ್ನು ಕತ್ತಿಯಿಂದ ಕಡಿದು ಸ್ನೇಹಿತರಿಂದಲೇ ಬರ್ಬರ ಹತ್ಯೆ!
05/07/2022
ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.
ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಮಾರಿಪಳ್ಳದ ಮಹಮ್ಮದ್ ನೌಸೀರ್ ಮತ್ತೋರ್ವ ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.
ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.