ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಶಾಲೆ, ಕಾಲೇಜುಗಳಿಗೆ ರಜೆ
ಉಡುಪಿ: ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಹವಮಾನ ಇಲಾಖೆ ಮತ್ತೆ ಎರಡು ದಿನ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆ ಜುಲೈ 8 ಮತ್ತು 9 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈಗಾಗಲೇ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಅನೇಕ ಪ್ರದೇಶಗಳು ನೆರೆಪೀಡಿತವಾಗಿದೆ. ಅಲ್ಲದೆ ಹವಮಾನ ಇಲಾಖೆ ಎರಡು ದಿನ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಸರ್ಕಾರಿ ಖಾಸಗಿ ಶಾಲಾ ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಿ ಉಡುಪಿ ಡಿಸಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
ಮಳೆ ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು. ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ಕೂಡ ಸೂಚಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka