ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ?: ದಿಢೀರ್ ಆಸ್ಪತ್ರೆಗೆ ದಾಖಲು
ಚೆನ್ನೈ: ತಮಿಳಿನ ಖ್ಯಾತನಟ ಚಿಯಾನ್ ವಿಕ್ರಮ್ ಅವರು ತೀವ್ರ ಎದೆ ನೋವಿನ ಕಾರಣ ದಿಢೀರ್ ಆಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದ್ದು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಕ್ರಮ್ ಅವರ ಮೇಲೆ ತೀವ್ರ ನಿಗಾ ಇರಿಸಿರುವ ವೈದ್ಯರು, ಚಿಕಿತ್ಸೆ ಮುಂದುವರಿಸಿದ್ದಾರೆ. ಆರೋಗ್ಯದಲ್ಲಿ ದಿಢೀರ್ ಏರುಪೇರಾದ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೂ ವಿಕ್ರಮ್ ಅವರಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿಗಳು ಕೂಡ ಹರಡುತ್ತಿದ್ದು, ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿದೆ. 56 ವರ್ಷ ವಯಸ್ಸಿನ ವಿಕ್ರಮ್ ಅವರು ಹೆಚ್ಚು ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುತ್ತಾರೆ. ಆರೋಗ್ಯವಂತರಾಗಿದ್ದ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka