ವಿದೇಶದಿಂದ ಬಂದಿದ್ದ ವ್ಯಕ್ತಿಗೆ ಮಂಗನ ಕಾಯಿಲೆ ಶಂಕೆ

ತಿರುವನಂತಪುರಂ: ವಿದೇಶದಿಂದ ಬಂದಿದ್ದ ವ್ಯಕ್ತಿಗೆ ಮಂಗನ ಕಾಯಿಲೆ ಶಂಕೆ ವ್ಯಕ್ತವಾಗಿದೆ. ಈತ ನಾಲ್ಕು ದಿನಗಳ ಹಿಂದೆ ಯು ಎ ಇ ಯಿಂದ ಕೇರಳಕ್ಕೆ ಬಂದಿದ್ದು,ಇವರೊಂದಿಗೆ ಯುಎಇಯಲ್ಲಿ ಸಂಪರ್ಕದಲ್ಲಿದ್ದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದ್ದು, ಈತನನ್ನು ಇಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಪ್ರಾಥಮಿಕ ಪರೀಕ್ಷೆಯಲ್ಲಿ ಮಂಗನ ಕಾಯಿಲೆಯ ಶಂಕೆ ವ್ಯಕ್ತವಾಗಿದ್ದರಿಂದ ಈತನನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ರೋಗಿಯ ಸ್ಯಾಂಪಲ್ ನ್ನು ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದ್ದು, ಪರೀಕ್ಷೆಯ ಫಲಿತಾಂಶದ ನಂತರ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ರೋಗಿಯ ಕುಟುಂಬ ಸದಸ್ಯರನ್ನು ವಿಶೇಷ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka