ಮದ್ಯ ಮಾರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ!
ದಕ್ಷಿಣ ಕನ್ನಡ: ರಾಜ್ಯದಲ್ಲಿಯೇ ಮದ್ಯ ಮಾರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಗ್ರ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಪ್ರತೀ ವರ್ಷ ಸರಾಸರಿ 2.2 ಕೋಟಿ ಲೀಟರ್ ಮದ್ಯ ಮಾರಾಟವಾಗುತ್ತಿದೆ.
ವರದಿಗಳ ಪ್ರಕಾರ, ಜಿಲ್ಲೆಯಲ್ಲಿ ಪ್ರತೀ ದಿನ 60,000 ಲೀಟರ್ ಮದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮಾರಾಟವಾಗುತ್ತಿದೆ. ವಾರ್ಷಿಕ ಸರಾಸರಿ 1.4 ಕೋಟಿ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಈ ಆರ್ಥಿಕ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟದಿಂದ 370 ಕೋಟಿ ರೂಪಾಯಿ ಆದಾಯ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಅಧಿಕವಾಗಲು ಕೇರಳ ಗಡಿ ಭಾಗವಾಗಿರುವುದೂ ಕಾರಣ ಎಂದು ಹೇಳಲಾಗಿದೆ. ಕೇರಳ ರಾಜ್ಯದವರು ಕೂಡ ದಕ್ಷಿಣ ಕನ್ನಡ ಜಿಲ್ಲೆಯಿಂದ ಮದ್ಯ ಖರೀದಿ ಮಾಡುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka