ಪುತ್ರಿಯನ್ನು ಅಮೆರಿಕಕ್ಕೆ ಕಳುಹಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೆ ಬಲಿ!
ಚಿತ್ರದುರ್ಗ: ಮಗಳನ್ನು ಅಮೆರಿಕಕ್ಕೆ ಕಳುಹಿಸಿ ಮರಳುತ್ತಿದ್ದ ದಂಪತಿಗಳು ರಾಷ್ಟ್ರೀಯ ಹೆದ್ದಾರಿ 48ರ ಚಿತ್ರದುರ್ಗ ಜಿಲ್ಲೆಯ ಕಸವನಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ದಾವಣಗೆರೆಯ ನಿವೃತ್ತ ಅಬಕಾರಿ ಅಧಿಕಾರಿ ಜಯರಾಂ ನಾಯ್ಕ್ (73) ಹಾಗೂ ಇವರ ಪತ್ನಿ ಹೇಮಾವತಿಬಾಯಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಪುತ್ರಿಯನ್ನು ಬೆಂಗಳೂರಿನಿಂದ ಅಮೆರಿಕಕ್ಕೆ ಕಳುಹಿಸಿ ದಾವಣಗೆರೆಗೆ ಕಾರಿನಲ್ಲಿ ಮರಳುತ್ತಿದ್ದಾಗ ಮುಂದೆ ಹೋಗುತ್ತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಪತಿ-ಪತ್ನಿ ಇಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಇವರಿಗೆ ಇಬ್ಬರು ಪುತ್ರಿಯರಿದ್ದು, ಆ ಪೈಕಿ ಮೊದಲನೆಯವಳು ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದು, ಎರಡನೆಯವಳನ್ನು ಅಮೆರಿಕಕ್ಕೆ ಕಳುಹಿಸಿದ್ದರು. ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಉಂಟಾಗಿದ್ದು, ಪ್ರಕರಣ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka