ಮತ್ತೊಂದು ಇ—ಬೈಕ್ ಅವಘಡ: ಚಾರ್ಜ್ ಮಾಡುವ ವೇಳೆ 7 ಬೈಕ್ ಸುಟ್ಟು ಕರಕಲು - Mahanayaka
7:41 AM Thursday 12 - December 2024

ಮತ್ತೊಂದು ಇ—ಬೈಕ್ ಅವಘಡ: ಚಾರ್ಜ್ ಮಾಡುವ ವೇಳೆ 7 ಬೈಕ್ ಸುಟ್ಟು ಕರಕಲು

elecretic bike
19/07/2022

ಮಹಾರಾಷ್ಟ್ರದ ಪುಣೆಯಲ್ಲಿರುವ ಇ-ಬೈಕ್ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಏಳು ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಕರಕಲಾಗಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಚಾರ್ಜ್ ಮಾಡುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಘಟನೆಯಲ್ಲಿ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.

ಗಂಗಾಧಾಮ್ ಪ್ರದೇಶದ ಬಳಿ ಇರುವ ಇ-ಬೈಕ್ ಶೋರೂಂನಲ್ಲಿ ಈ ಘಟನೆ ನಡೆದಿದೆ. ಚಾರ್ಜ್ ಮಾಡಲು ಬೈಕ್ ಗಳನ್ನು ಪ್ಲಗ್ ಇನ್ ಮಾಡಲಾಗಿತ್ತು. ಅತಿಯಾದ ಚಾರ್ಜ್‌ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿಗೆ ಕಾರಣವಾಗಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ.

ವಿವರವಾದ ತನಿಖೆಯ ನಂತರವೇ ಬೆಂಕಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದಿಂದ ಹಾರಿದ ಬಾಲಕಿ!

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: ಮನೆ ಕೆಲಸಕ್ಕಿದ್ದ ದಂಪತಿ ಅರೆಸ್ಟ್

 

ಇತ್ತೀಚಿನ ಸುದ್ದಿ