ಸೇತುವೆ ಬಳಿಯಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಸ್ವಿಫ್ಟ್ ಡಿಸೈರ್ ಮತ್ತು ಮಾರುತಿ 800 ಮುಖಾಮುಖಿ ಡಿಕ್ಕಿಯಾಗಿ 800 ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಕೆಮ್ಮಾರ ನಿವಾಸಿ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಸಾಮೆತ್ತಡ್ಕದ ನಿವಾಸಿ ಅಬ್ದುಲ್ ಮಜೀದ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಹಳೆಗೇಟಿನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ 800 ಕಾರು ಕೂಟೇಲು ಸೇತುವೆಯ ಬಳಿ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಸ್ವಿಫ್ಟ್ ಡಿಸೈರ್ ಕಾರು ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದ್ದರೆ, ಮಾರುತಿ 800 ಕಾರು ರಸ್ತೆಯ ಇನ್ನೊಂದು ಬದಿ ಉಪ್ಪಿನಂಗಡಿ ಕಡೆಗೆ ಮುಖ ಮಾಡಿ ನಿಂತಿದೆ. ಮಾರುತಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka