ಫೆಮಿನಾ ಮಿಸ್ ಇಂಡಿಯಾ ಸಿನಿ ಶೆಟ್ಟಿಗೆ ‘ ಮಿಸ್ ವರ್ಲ್ಡ್’ ಆಗೋ ಬಯಕೆ
ಬಜ್ಪೆ: 2022ರ ‘ಫೆಮಿನಾ ಮಿಸ್ ಇಂಡಿಯಾ’ ಕಿರೀಟ ಮುಡಿಗೇರಿಸಿಕೊಂಡ ಸಿನಿ ಶೆಟ್ಟಿ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದರು.
ಸೀರೆಯಲ್ಲಿ ಮಿಂಚುತ್ತಿದ್ದ ಸಿನಿ ಶೆಟ್ಟಿ ಅವರಿಗೆ ಹೂಮಾಲೆ ಹಾಕಿ, ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಕುಟುಂಬಸ್ಥರು ಸಾಂಪ್ರದಾಯಿಕವಾಗಿ ಆರತಿ ಬೆಳಗಿದರು.
ಉಡುಪಿಯ ಇನ್ನಂಜೆ ಮೂಲದವರಾದ ಸಿನಿ ಶೆಟ್ಟಿಯವರು ಮುಂಬೈಯಲ್ಲಿಯೇ ಹುಟ್ಟಿ ಬೆಳೆದಿದ್ದು, ‘ಮಿಸ್ ಇಂಡಿಯಾ’ ಕಿರೀಟ ಅಲಂಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾರೆ.
ತುಳು ಭಾಷೆಯಲ್ಲಿ ಧನ್ಯವಾದ ತಿಳಿಸಿದ ಸಿನಿ ಶೆಟ್ಟಿ, ಮಿಸ್ ವರ್ಲ್ಡ್ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಒಳ್ಳೆಯ ಕಥೆ ಸಿಕ್ಕಿದರೆ ಸಿನಿಮಾದಲ್ಲಿ ನಟನೆ ಮಾಡುವುದಾಗಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka