ಮಹಿಳೆಯ ಮಾನಭಂಗಕ್ಕೆ ಯತ್ನ: 9 ವರ್ಷದಿಂದ ತಲೆ ಮರೆಸಿದ್ದ ಆರೋಪಿಯ ಬಂಧನ
![arrest](https://www.mahanayaka.in/wp-content/uploads/2022/07/arrest-2.jpg)
ಬಜ್ಪೆ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣವೊಂದರಲ್ಲಿ ಪೊಲೀಸರಿಂದ 9 ವರ್ಷ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸವಿರುವ ನೌಶಾದ್ ಎಂದು ತಿಳಿದು ಬಂದಿದೆ.
ಈತ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನು ಎಳೆದು ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ.
ಈ ಕುರಿತು ಮಹಿಳೆ ದೂರು ನೀಡಿದ್ದು, ಪ್ರಕರಣ ಹಿಂಪಡೆಯುವಂತೆ ನೌಶಾದ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದ ಎಂದು ಮಹಿಳೆ ಮತ್ತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿತ್ತು.
ಆರೋಪಿ ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ. ಈತ ಉಡುಪಿ ಜಿಲ್ಲೆಯ ಕಾಪು ನಲ್ಲಿರುವ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ದಾಳಿ ಮಾಡಿ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka