ಬಿಜೆಪಿಯಲ್ಲೂ ಆರಂಭವಾಯ್ತು ದಲಿತ ಸಿಎಂ ಚರ್ಚೆ!
ಬೆಂಗಳೂರು: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಚರ್ಚೆ ಮುಗಿದು ಬಣ ರಾಜಕೀಯ ಆರಂಭವಾಗಿದ್ದರೆ, ಇತ ಬಿಜೆಪಿಯಲ್ಲಿ ದಲಿತ ಸಿಎಂ ಚರ್ಚೆ ಆರಂಭವಾಗಿದ್ದು, ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿಕೆ ಇದೀಗ ಬಿಜೆಪಿಯಲ್ಲಿ ದಲಿತ ಸಿಎಂ ಚರ್ಚೆಯನ್ನು ಹುಟ್ಟು ಹಾಕಿದೆ.
ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆ ಬಿಜೆಪಿಯಲ್ಲಿಯೂ ದಲಿತ ಸಿಎಂ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಒಗ್ಗಟ್ಟಿಲ್ಲ, ಸ್ಥಾನಮಾನಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತ ಸಿಎಂ ಎಂಬುದು ಆ ಪಕ್ಷದಲ್ಲಿ ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುವುದು ಬಿಜೆಪಿಯಲ್ಲಿ ಮಾತ್ರ. ಹಿರಿಯ ನಾಯಕರು, ಸಚಿವರಾಗಿರುವ ಗೋವಿಂದ ಕಾರಜೋಳ ಅವರನ್ನು ಸಿಎಂ ಮಾಡುತ್ತೇವೆ. ಸಾಧ್ಯವಾದರೆ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka