ಚೆಂಡು ಹೆಕ್ಕಲು ಹೋಗಿದ್ದ ಬಾಲಕ ವಿದ್ಯುತ್ ತಂತಿ ತಗುಲಿ ಸಾವು
ರಾಯಚೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ ವೇಳೆ ಚೆಂಡು ತರಲು ಹೋಗಿದ್ದ ಬಾಲಕ ವಿದ್ಯುತ್ ತಂತಿ ತಗುಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದ ಶಾಲೆಯಲ್ಲಿ ನಡೆದಿದೆ.
ಕಿಲ್ಲಾರಹಟ್ಟಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದ ಮಲ್ಲಿಕಾರ್ಜುನ (13) ಮೃತ ಬಾಲಕ. ಕ್ರಿಕೆಟ್ ಆಡುತ್ತಿದ್ದ ವೇಳೆ ಚೆಂಡು ಪಕ್ಕದ ನಿರ್ಮಾಣ ಹಂತದಲ್ಲಿರುವ ಬಿಸಿಯೂಟದ ಕೋಣೆ ಬಳಿ ಹೋಗಿದ್ದು, ಚೆಂಡು ಹೆಕ್ಕಲೆಂದು ಬಾಲಕ ತೆರಳಿದಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka