ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಟ್ವೀಟ್
27/07/2022
ಬೆಂಗಳೂರು: ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ಜಾತಿ ಧರ್ಮ ನೋಡದೇ ಆರೋಪಿಗಳನ್ನು ಬಂಧಿಸಿ ಮುಲಾಜಿಲ್ಲದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka