ಸುರತ್ಕಲ್ ನಲ್ಲಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಯುವಕ ಸಾವು
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ.
ಸುರತ್ಕಲ್ ಎಸ್.ಕೆ.ಮೊಬೈಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರ ಜೊತೆಗೆ ಮಾತನಾಡುತ್ತಿದ್ದ ಫಾಝಿಲ್ ರಸ್ತೆ ಕಡೆಗೆ ಹೋಗಲು ಯತ್ನಿಸುತ್ತಿದ್ದಂತೆಯೇ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ, ಚಿಕಿತ್ಸೆ ಫಲಿಸದೇ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka