ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ: ಚಕ್ರವರ್ತಿ ಸೂಲಿಬೆಲೆ ಆಕ್ರೋಶ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ. ಆದ್ರೆ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎಂದು ಬಿಜೆಪಿ ಪರ ಭಾಷಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ಹೊರ ಹಾಕಿದ್ದಾರೆ.
ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಿರುವ ಚಕ್ರವರ್ತಿ ಸೂಲಿಬೆಲೆ ಶಾಸಕರು ಹಾಗೂ ಸಂಸದರನ್ನು ತೀವ್ರವಾಗಿ ತರಾಟೆಗೆತ್ತಿಕೊಂಡರು.
ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಜಿಲ್ಲೆಯಲ್ಲಿ ಆಸ್ಪತ್ರೆಗಾಗಿ ಬಂದು ಹೋರಾಟ ಮಾಡುತ್ತಿದ್ದೇವೆ. ಈ ಪ್ರತಿಭಟನೆಗೆ ಸಾಥ್ ನೀಡಲು ಒಬ್ಬ ಅಯೋಗ್ಯ ಶಾಸಕ ಕೂಡ ಬಂದಿಲ್ಲ. ಅಷ್ಟೇ ಅಲ್ಲದೇ ಉತ್ತರ ಕನ್ನಡದ ಸಂಸದರಾಗಿಯೇ ಅನಂತ್ ಕುಮಾರ್ ಹೆಗಡೆ ಐದಾರು ಬಾರಿ ಆಯ್ಕೆ ಆಗಿದ್ದಾರೆ. ಆದರೆ ನಯಾ ಪೈಸೆಯೂ ಉಪಯೋಗವಾಗಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕನ್ನಡದಲ್ಲಿ ಟೂರಿಸಂ ಅಭಿವೃದ್ಧಿ ಮಾಡಿದರೆ ಬೆಂಗಳೂರಿಗೆ ಉದ್ಯೋಗ ಅರಸಿ ಬರಬೇಕಾಗಿಲ್ಲ. ಆದರೆ ಜನಪ್ರತಿನಿಧಿಗಳು ಅಭಿವೃದ್ಧಿ ಬಗ್ಗೆ ತಲೆಕೆಡೆಸಿಕೊಳ್ಳುತ್ತಿಲ್ಲ , ಜನಪ್ರತಿನಿಧಿಗಳು ಮಾಡಿರುವ ಹಣ ಎಷ್ಟಿದೆ ಅಂದರೆ ನೀವ್ಯಾರು ವೋಟು ಮಾಡದೇ ಇದ್ದರೂ ಅವರು ಗೆಲುವು ಸಾಧಿಸುತ್ತಾರೆ. ಅವರ ಸಾಮರ್ಥ್ಯ ಅಷ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡದವರು ಆಕ್ರೋಶದಿಂದ ತಮಗೆ ಬೇಕಾದ್ದದ್ದನ್ನು ಪಡೆಯುತ್ತಾರೆ. ಆದರೆ ಉತ್ತರ ಕನ್ನಡದವರು ಸಾಫ್ಟ್ ಆಗಿ ಹೇಳುತ್ತಾರೆ. ಆದರೆ ಜನಪ್ರತಿನಿಧಿಗಳದ್ದು ಎಮ್ಮೆ ಚರ್ಮ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka